ಜೆಡಿಎಸ್’ನಿಂದ ರೈತರಿಗೆ ಬಂಪರ್ ಆಫರ್..!

First Published 28, Jan 2018, 11:38 AM IST
JDS Bumper Offer Fir Farmers
Highlights

ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ, ನಿರ್ಗತಿಕರಿಗೆ ಮಾಸಾಶನ ಹೆಚ್ಚಳ ಸೇರಿದಂತೆ ಬಡವ ಹಾಗೂ ರೈತಾಪಿಗಳ ಪರ ಹತ್ತು ಹಲವು ಯೋಜನೆ ಜಾರಿಗೆ ತರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಪಾವಗಡ: ಪಕ್ಷ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ, ನಿರ್ಗತಿಕರಿಗೆ ಮಾಸಾಶನ ಹೆಚ್ಚಳ ಸೇರಿದಂತೆ ಬಡವ ಹಾಗೂ ರೈತಾಪಿಗಳ ಪರ ಹತ್ತು ಹಲವು ಯೋಜನೆ ಜಾರಿಗೆ ತರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಕುಮಾರಪರ್ವ ಹಾಗೂ ಕರ್ನಾಟಕ ವಿಕಾಸ ವಾಹಿನಿ ಕಾರ್ಯಕ್ರಮದ ಪ್ರಯುಕ್ತ ಶನಿವಾರ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅನೇಕ ಗ್ರಾಮಗಳಲ್ಲಿ ಅವರು ಪ್ರವಾಸ ನಡೆಸಿದರು.

ಈ ವೇಳೆ ಮಾತನಾಡಿ, ರೈತರ ಸಾಲ ಮನ್ನಾ, ಅಂಗನವಾಡಿ, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ, ರೈತರ ಪಂಪ್‌ಸೆಟ್ ಹಾಗೂ ಕೈಗಾರಿಕೆಗಳಿಗೆ 24 ಗಂಟೆಗಳ ಕಾಲ ವಿದ್ಯುತ್ ಪೂರೈಕೆ, ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ, ಶೇ.50ರ ರಿಯಾಯಿತಿ ದರದಲ್ಲಿ ಕೃಷಿ ಸಲಕರಣೆಗಳ ಸೌಲಭ್ಯ, ಯುವಕರಿಗೆ ಉದ್ಯೋಗ ಸೃಷ್ಟಿ, ಶಾಶ್ವತ ಕುಡಿವ ನೀರು ಸೇರಿದಂತೆ ಹತ್ತು ಹಲವು ಕಾರ್ಯಕ್ರಮ ಜಾರಿಗೆ ತರುವುದಾಗಿ ಹೇಳಿದರು.

loader