ಬೆಂಗಳೂರು [ಜು.29]  ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಮುಂಬೈ ಸೇರಿಕೊಂಡಿದ್ದ 17 ಶಾಸಕರಿಗೆ ವಿಧಾನಸಭೆ ಬಾಗಿಲು ಬಂದ್ ಆಗಿದೆ. ರಾಜೀನಾಮೆ ಕೊಟ್ಟು  ಸ್ಪೀಕರ್ ರಮೇಶ್ ಕುಮಾರ್ ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಆದರೆ ಬಿಜೆಪಿ ಇನ್ನೊಂದು ಮಗ್ಗುಲಿನಲ್ಲಿ ಆಪರೇಶನ್ ಆರಂಭಿಸಿದೆ.

ದೋಸ್ತಿ ಪಕ್ಷಗಳ ಆರು ಜನರು ಬಿಜೆಪಿಯತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಜೆಡಿಎಸ್ ಒಬ್ಬ ಶಾಸಕ ಸೇರಿದಂತೆ ಒಟ್ಟು ಆರು ಮಂದಿ ಬಿಜೆಪಿ ಸೇರಲು ಮುಂದಾಗಿದ್ದರು. ಅನರ್ಹತೆ ಭೀತಿಯಿಂದಾಗಿ ಇಷ್ಟು ದಿನ ದೂರ ಉಳಿದಿದ್ದರು ಎನ್ನಲಾಗಿದೆ.  ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಹುಮತ ಸಾಬೀತುಪಡಿಸಿದ ಬಳಿಕ ರಮೇಶ್ ಕುಮಾರ್ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇವರ ಹಾದಿ ಸುಗಮವಾಗಿದೆ.

ಸಿದ್ದರಾಮಯ್ಯ ಅತ್ಯಾಪ್ತ ಬಿಚ್ಚಿಟ್ಟ ‘ಅತೃಪ್ತಿ’ಯ ಗುಟ್ಟು

ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಇದೀಗ ಬಿಜೆಪಿಯ ನಾಯಕರೊಬ್ಬರು ಸಭಾಧ್ಯಕ್ಷರಾಗಲಿದ್ದಾರೆ. ಬಿಜೆಪಿ ಬೆಂಬಲಿತ ಸ್ಪೀಕರ್ ಆಯ್ಕೆಯಾದರೆ ರಾಜೀನಾಮೆ ಸಹ ಬೇಗ ಅಂಗೀಕಾರವಾಗಲಿದೆ ಎಂಬ ಚಿಂತನೆಯಲ್ಲಿ ಅತೃಪ್ತರಿದ್ದರು. ಹಾಗಾಗಿ ಇಷ್ಟು ದಿನ ರಾಜೀನಾಮೆಯಿಂದ ದೂರ ಉಳಿದುಕೊಂಡಿದ್ದರು.

ಉತ್ತರ ಕರ್ನಾಟಕಕ್ಕೊಂದು ಡಿಸಿಎಂ ಪೋಸ್ಟ್?

ಯಾವ ಕಾರಣಕ್ಕೆ ಮತ್ತೊಂದು ಆಪರೇಶನ್?  ಅನರ್ಹಗೊಂಡ ಶಾಸಕರ ಪೈಕಿ ಹಳೆ ಮೈಸೂರು ಭಾಗದವರು ಇದ್ದಾರೆ. ಈ ಭಾಗದಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಇಲ್ಲ. ಉಪಚುನಾವಣೆ ನಡೆದರೆ ಇಲ್ಲಿ ಜಯಗಳಿಸುವುದು ಅಷ್ಟು ಸುಲಭವಲ್ಲ. ಹೀಗಾಗಿ ಮತ್ತೆ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ ಎನ್ನುವುದು ಮೊದಲ ಅಂಶ.

ಒಂದು ವೇಳೆ ರಾಜೀನಾಮೆ ನೀಡಿರುವ ಶಾಸಕರು ಸೋತರೆ ಮತ್ತೆ ಸರ್ಕಾರ ಅಲ್ಪ ಮತಕ್ಕೆ ಕುಸಿಯಬಹುದು. ಈ ರೀತಿ ಆಗದಂತೆ ತಡೆಯಲು ಬಿಜೆಪಿ ಈಗ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ಸೆಳೆಯಲು ಪ್ರಯತ್ನ ನಡೆಸುತ್ತಿದೆ. ಅತೃಪ್ತ ಶಾಸಕರ ಜೊತೆ ಸ್ನೇಹಿತರಾಗಿರುವ ಶಾಸಕರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು ತಂತ್ರಗಳ ಪ್ರಯೋಗ ಮಾಡುತ್ತಿದೆ.