ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಬಳಿಕ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು 5247 ಮತಗಳು, ಬಿಜೆಪಿ ಅಭ್ಯರ್ಥಿ ಬಸವರಾಜು 4947 ಮತಗಳು, ಕಾಂಗ್ರೆಸ್ ಅಭ್ಯರ್ಥಿ ನಿರಂಜನ್ ಅವರಿಗೆ 496 ಮತಗಳು ಲಭಿಸಿವೆ. ತಿರಸ್ಕೃತ ಮತಗಳು 1237, ಜೆಡಿಎಸ್ ಬಂಡಾಯ ಅಭ್ಯರ್ಥಿ  ಹೆಚ್. ಎಸ್. ಅರವಿಂದ್ ಅವರಿಗೆ 746 ಮತಗಳು ಬಂದಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಠೇವಣಿ ನಷ್ಟವಾಗಿದೆ.

ವಿಧಾನ ಪರಿಷತ್ ಆಗ್ನೇಯ ಶಿಕ್ಷಕರ ಕ್ಷೇತ್ರದ ಉಪಚುನಾವಣೆಯಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮುಂದುವರಿದಿದ್ದು ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದೆ. ಈ ಮೂಲಕ ವಿಜಯಲಕ್ಷ್ಮಿ ಜಾತ್ಯಾತೀತ ಜನತಾದಳಕ್ಕೆ ಒಲಿಯುವ ಸಾಧ್ಯತೆ ಹೆಚ್ಚಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೊದಲ ಪ್ರಾಶಸ್ತ್ಯದ ಮತ ಎಣಿಕೆ ಬಳಿಕ ಜೆಡಿಎಸ್ ಅಭ್ಯರ್ಥಿ ರಮೇಶ್ ಬಾಬು 5247 ಮತಗಳು, ಬಿಜೆಪಿ ಅಭ್ಯರ್ಥಿ ಬಸವರಾಜು 4947 ಮತಗಳು, ಕಾಂಗ್ರೆಸ್ ಅಭ್ಯರ್ಥಿ ನಿರಂಜನ್ ಅವರಿಗೆ 496 ಮತಗಳು ಲಭಿಸಿವೆ. ತಿರಸ್ಕೃತ ಮತಗಳು 1237, ಜೆಡಿಎಸ್ ಬಂಡಾಯ ಅಭ್ಯರ್ಥಿ ಹೆಚ್. ಎಸ್. ಅರವಿಂದ್ ಅವರಿಗೆ 746 ಮತಗಳು ಬಂದಿವೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಠೇವಣಿ ನಷ್ಟವಾಗಿದೆ.

ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಪರಿಷತ್ ಸದಸ್ಯರಾಗಿದ್ದ ವೈ.ಎ. ನಾರಾಯಣ ಸ್ವಾಮಿ ಅವರ ರಾಜೀನಾಮೆಯಿಂದ ಸ್ಥಾನ ತೆರವಾಗಿತ್ತು. ನಾರಾಯಣ ಸ್ವಾಮಿ ಅವರು ಹೆಬ್ಬಾಳ ಕ್ಷೇತ್ರ ಉಪ ಚುನಾವಣೆಯಲ್ಲಿ ಜಯಗಳಿಸಿ ವಿಧಾನಸಭೆ ಪ್ರವೇಶಿಸಿದ್ದರು.