ವಾಸ್ತವವಾಗಿ ದೇವೇಗೌಡ ಅವರು ಬರುವ ಜೂನ್‌ನಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯಾಗಬೇಕಿತ್ತು.

ಬೆಂಗಳೂರು(ನ.11): ಜೆಡಿಎಸ್ ಮುಖಂಡ ಹಾಗೂ ಕಳೆದ ಬಾರಿ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅತ್ಯಲ್ಪ ಮತಗಳ ಅಂತರದಿಂದ ಸೋಲುಂಡಿದ್ದ ಅ.ದೇವೇಗೌಡ ಬಿಜೆಪಿಗೆ ಸೇರ್ಪಡೆಗೊಳ್ಳುವುದು ಬಹುತೇಕ ನಿಚ್ಚಳವಾಗಿದೆ.

ಶುಕ್ರವಾರ ಬೆಳಗ್ಗೆ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಅವರು ಬಿಜೆಪಿಗೆ ಸೇರ್ಪಡೆಗೊಳ್ಳುವ ಬಗ್ಗೆ ನಿರ್ಧಾರ ಕೈಗೊಂಡರು ಎಂದು ತಿಳಿದು ಬಂದಿದೆ. ವಾಸ್ತವವಾಗಿ ದೇವೇಗೌಡ ಅವರು ಬರುವ ಜೂನ್‌ನಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯಾಗಬೇಕಿತ್ತು. ಅದಕ್ಕಾಗಿ ಸಿದ್ಧತೆಯನ್ನೂ ನಡೆಸಿದ್ದರು. ಆದರೆ, ಮಾಜಿ ಶಾಸಕ ಎಲ್.ಆರ್. ಶಿವರಾಮೇಗೌಡ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾದ ನಂತರ ಅವರನ್ನೇ ಕಣಕ್ಕಿಳಿಸಲು ಜೆಡಿಎಸ್ ನಾಯಕರು ತೀರ್ಮಾನಿಸಿದರು. ಹೀಗಾಗಿ, ಎ.ದೇವೇಗೌಡರು ಜೆಡಿಎಸ್ ತೊರೆಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.