ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜೆಡಿಎಸ್ ಮುಖಂಡ ಮಾಜಿ ಪ್ರಧಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾಲಮನ್ನಾ ಕುರಿತ ಮೋದಿ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ.
ನವದೆಹಲಿ: ಸಮ್ಮಿಶ್ರ ಸರ್ಕಾರದ ಸಾಲ ಮನ್ನಾ ಯೋಜನೆ ಕುರಿತ ಪ್ರಧಾನಿ ನರೇಂದ್ರ ಮೋದಿ ಟೀಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ತು, ಈಗ ಸ್ವತಃ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡ ಕೂಡ ತೀವ್ರ ಕಿಡಿಕಾರಿದ್ದಾರೆ.
ಪ್ರಧಾನಿ ಹೇಳಿದಂತೆ ಸಾಲ ಮನ್ನಾ ಯೋಜನೆ ತಲುಪಿದ್ದು 800 ಮಂದಿಯನ್ನಲ್ಲ, 60 ಸಾವಿರ ರೈತರನ್ನು ತಲುಪಿದೆ. ಪ್ರಧಾನಿ ಈ ರೀತಿ ವ್ಯಂಗ್ಯವಾಗಿ ಮಾತನಾಡುವುದನ್ನು ಬಿಡಬೇಕು.
ಮುಂದಿನ ದಿನಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ 21.7 ಲಕ್ಷ ಮತ್ತು ಸಹಕಾರಿ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ 18.3ಲಕ್ಷ ರೈತರನ್ನು ಈ ಯೋಜನೆ ತಲುಪಲಿದೆ ಎಂದು ಹೇಳಿದರು.
