ಜೆಡಿಎಸ್ ಶಾಸಕ ಖೂಬಾ ಬಿಜೆಪಿಗೆ : ಮತ ಮಾತ್ರ ಜೆಡಿಎಸ್’ಗೆ

JDS Leader Mallikarjun Khuba will join BJP Party
Highlights

ಜೆಡಿಎಸ್‌ಗೆ ರಾಜಿನಾಮೆ ನೀಡಿ ಮಾ.26ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿ ದ್ದೇನೆ. ಆದರೆ, ರಾಜ್ಯಸಭಾ ಚುನಾವಣೆಯಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಲಿದ್ದೇನೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.

ಬಸವಕಲ್ಯಾಣ (ಬೀದರ್): ಜೆಡಿಎಸ್‌ಗೆ ರಾಜಿನಾಮೆ ನೀಡಿ ಮಾ.26ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿ ದ್ದೇನೆ. ಆದರೆ, ರಾಜ್ಯಸಭಾ ಚುನಾವಣೆಯಲ್ಲಿ ಮಾತ್ರ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕಲಿದ್ದೇನೆ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ನನ್ನ ಬೆಂಬಲಿಗರು ರಾಷ್ಟ್ರೀಯ ಪಕ್ಷದಿಂದ ಸ್ಪರ್ಧಿಸುವಂತೆ ನನ್ನ ಮೇಲೆ ಒತ್ತಡ ಹಾಕುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದೇನೆ. ಈಗಾಗಲೇ ಬಿಜೆಪಿಯಿಂದ ಅಹ್ವಾನ ಬಂದಿದ್ದು, ಮಾ. 26ರಂದು ಬೆಂಗಳೂರು ಅಥವಾ ಬಸವಕಲ್ಯಾಣದಲ್ಲಿ ಬಿಜೆಪಿಗೆ ಸೇರಲಿದ್ದೇನೆ ಎಂದರು.

ರಾಜ್ಯ ಸರ್ಕಾರ ಅನುದಾನ ನೀಡುವಲ್ಲಿ ಬಸವಕಲ್ಯಾಣಕ್ಕೆ ಮಲತಾಯಿ ಧೊರಣೆ ಅನುಸರಿಸಿದೆ. ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಸಾಕಷ್ಟು ಅನುದಾನ ನೀಡಿದೆ. ಹೀಗಾಗಿ, ಮುಂದಿನ ಚುನಾವಣೆಯಲ್ಲಿ ಕರ್ನಾಟಕ ಮುಕ್ತ ಕಾಂಗ್ರೆಸ್ ಆಗಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹಾಗೂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ. ಕುಮಾರಸ್ವಾಮಿ ಜೊತೆ ಸುಮಾರು 14 ವರ್ಷಗಳ ಕಾಲ ಅವರ ಜೊತೆಗಿದ್ದೇನೆ. ಈಗಲೂ ಇಬ್ಬರು ಒಂದೇ ಎಂದರು.

loader