ಬೆಂಗಳೂರು [ಜು.27] :  ಸದ್ಯ ರಾಜ್ಯದಲ್ಲಿದೋಸ್ತಿ ಸರ್ಕಾರ ಅಧಿಕಾರ ಕಳೆದುಕೊಂಡಿದೆ. ಇದೇ ವೇಳೆ ಬಿಜೆಪಿಗೆ ಜೆಡಿಎಸ್ ಬಾಹ್ಯ ಬೆಂಬಲ ನೀಡುತ್ತಿದೆ ಎನ್ನಲಾಗುತ್ತಿದೆ. 

ಆದರೆ ಈ ಬೆಂಬಲ ನೀಡಿಕೆ ಬಗ್ಗೆ  ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡರು ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡಿದ್ದಾರೆ. 

ಎಲ್ಲಾ ವಿಷಯಕ್ಕೂ ಸುಮ್ಮನೆ ವಿರೋಧ ಮಾಡುವುದಿಲ್ಲ. ಫೈನಾನ್ಸ್ ಬಿಲ್ ಗೆ ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ  ನಮ್ಮ ಬೆಂಬಲವೂ ಇರುತ್ತದೆ ಎಂದಿದ್ದಾರೆ. 

ಇನ್ನು  ಕೆಲ ಶಾಸಕರು ಬಿಜೆಪಿಗೆ ಬೆಂಬಲ ಕೊಡುವ ಬಗ್ಗೆ ಒತ್ತಡ ಹಾಕಿದರು ಎನ್ನುವ ಜಿ.ಟಿ. ದೇವೇಗೌಡರ ಹೇಳಿಕೆ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ ಎಂದೂ ದೇವೇಗೌಡರು ಹೇಳಿದರು. 

HDK ನೇತೃತ್ವದಲ್ಲಿ ಸಭೆ, ಬಿಜೆಪಿಗೆ ಜೆಡಿಎಸ್‌ ಬಾಹ್ಯ ಬೆಂಬಲ?

ಪ್ರಾದೇಶಿಕ ಪಕ್ಷವಾಗಿ ನಮ್ಮ ಕೆಲಸ ನಾವು ಮಾಡುತ್ತೇವೆ. ಕುಮಾರಸ್ವಾಮಿ ಅಪ್ಪನಾಗಿ ನಾನು ಹೇಳುತ್ತಿದ್ದೇನೆ. ವಿಷಯಾಧಾರಿತವಾಗಿ ನಾವು ಬೆಂಬಲ ಕೊಡುತ್ತೇವೆ ಎಂದು ದೇವೇಗೌಡರು ಹೇಳಿದರು.

ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುವ ಯಡಿಯೂರಪ್ಪ ಹೇಳಿಕೆಯನ್ನು ತಾವು ಸ್ವಾಗತ ಮಾಡುವುದಾಗಿ ಈ ವೇಳೆ ದೇವೇಗೌಡರು ಹೇಳಿದರು.