ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಹಾಗೂ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದೆ ಅದರಲ್ಲಿ ಬಿ.ಎಸ್. ಯಡಿಯೂರಪ್ಪ ಅವರಂಥ ಕೆಟ್ಟ ಮುಖ್ಯಮಂತ್ರಿಯನ್ನು ಕಂಡಿಲ್ಲ ಎಂದು ಆರೋಪಿಸಿದರು.

ನವಲಗುಂದ(ಜು.21): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಕ್ತ ಸರಿಯಿಲ್ಲ. ಅವರದು ರೈತ ವಿರೋಧಿ ರಕ್ತ ಎಂದು ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಹರಿಹಾಯ್ದಿದ್ದಾರೆ.

ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ರೈತ ಹುತಾತ್ಮ ದಿನಾಚರಣೆ ಹಾಗೂ ರೈತರ ಸಮಾವೇಶದಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದೆ ಅದರಲ್ಲಿ ಬಿ.ಎಸ್. ಯಡಿಯೂರಪ್ಪ ಅವರಂಥ ಕೆಟ್ಟ ಮುಖ್ಯಮಂತ್ರಿಯನ್ನು ಕಂಡಿಲ್ಲ ಎಂದು ಆರೋಪಿಸಿದರು.

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿದರೆ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಬೀಳುತ್ತದೆ ಎಂದು ವೀರಾವೇಶದ ಹೇಳಿಕೆ ನೀಡುವ ಅವರು ನವಲಗುಂದಕ್ಕೆ ಬಂದು ಮಹದಾಯಿ ಹೋರಾಟಗಾರರ ಪರವಾಗಿ ಮಾತನಾಡಲಿ. ಸಾಲ ಮನ್ನಾ ವಿಚಾರವಾಗಿ ಸಿದ್ದರಾಮಯ್ಯ ಬದಲು ಅವರು ತಾಕತ್ತಿದ್ದರೆ ಕೇಂದ್ರದಲ್ಲಿರುವ ಕೇಂದ್ರ ನಾಯಕರ ಮೂಗು ಹಿಡಿಯಲಿ. ಪ್ರಧಾನಿ ಮೋದಿ ಮುಂದೆ ವೀರಾವೇಶದ ಮಾತು ಆಡಲಿ. ಇಲ್ಲವಾದರೆ ರೈತರೇ ಅವರ ಮನೆ ಬಾಗಿಲಿಗೆ ಹೋಗಿ ನಿಲ್ಲಲಿದ್ದಾರೆ ಎಂದು ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.