ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಂಬಂಧ ಈಗಾಗಲೇ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ಹಸಿರು ನಿಶಾನೆ ತೋರಿದ್ದಾರೆ ಎಂದರು.

ಗಂಗಾವತಿ(ಡಿ.12): ಜನವರಿ ಎರಡನೇ ವಾರದಲ್ಲಿ ತಾವು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಗಂಗಾವತಿ ಕ್ಷೇತ್ರದ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸೇರ್ಪಡೆಯಾಗುವ ಸಂಬಂಧ ಈಗಾಗಲೇ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ ಅವರು ಹಸಿರು ನಿಶಾನೆ ತೋರಿದ್ದಾರೆ ಎಂದರು.