ಬೆಂಗಳೂರು (ಆ.10]: ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು ಜನತೆ ತತ್ತರಿಸುತ್ತಿದ್ದಾರೆ.  

ಅತಿವೃಷ್ಟಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್‌ ಪಕ್ಷದ ಎಲ್ಲ ಶಾಸಕರು ತಮ್ಮ ಒಂದು ತಿಂಗಳ ವೇತನ ನೀಡಲು ನಿರ್ಧರಿಸಿದ್ದಾರೆ. 

ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದು, ಪಕ್ಷದ ಎಲ್ಲ ಶಾಸಕರು ನಮ್ಮ ಒಂದು ತಿಂಗಳ ವೇತನವನ್ನು ನೀಡುತ್ತಿದ್ದೇವೆ. ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ ತಮ್ಮಂದಿರೊಂದಿಗೆ ನಿಲ್ಲೋಣ ಎಂದು ಟ್ವೀಟ್‌ ಮೂಲಕ ತಿಳಿಸಿದ್ದಾರೆ.