ಡಾ.ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ 2013 ರಲ್ಲೇ ಡಾ.ಶಿವರಾಮಕಾರಂತ ಬಡಾವಣೆಯ ಡಿನೋಟಿಫಿಕೇಶನ್ ನಲ್ಲಿ ನಡೆದಿರೋ ಅಕ್ರಮಗಳ ಬಗ್ಗೆ ವರದಿ ತಯಾರಿಸಲು ಸರ್ಕಾರ 2012ರ ಕೊನೆಯಲ್ಲಿ ಐಎಎಸ್ ಅಧಿಕಾರಿಗಳ ಸಮಿತಿ ರಚನೆ ಮಾಡಿತ್ತು. ನಂತರ 2013ರಲ್ಲಿ ಆ ಸಮಿತಿಯ ವರದಿಯಲ್ಲಿ ಉನ್ನತ ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ ಎಂದು ಉಲ್ಲೇಖವಾಗಿತ್ತು. ಆದರೆ 4 ವರ್ಷದಿಂದ ಕ್ರಮ ಕೈಗೊಳ್ಳದ ಸರ್ಕಾರ ಈಗ ಕ್ರಮ ಕೈಗೊಳ್ಳುತ್ತಿರುವುದರ ಹಿಂದಿನ ದ್ದೇಶವೇನು ಎಂದು ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಲ್.ಬೋಜೇಗೌಡ ಪ್ರಶ್ನಿಸಿದ್ದಾರೆ.
ಚಿಕ್ಕಮಗಳೂರು: ಬಿಎಸ್.ಯಡಿಯೂರಪ್ಪ ವಿರುದ್ಧದ ಎಸಿಬಿ ಎಫ್ಐಆರ್ ಗೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಡಾ.ಶಿವರಾಮಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ 2013 ರಲ್ಲೇ ಡಾ.ಶಿವರಾಮಕಾರಂತ ಬಡಾವಣೆಯ ಡಿನೋಟಿಫಿಕೇಶನ್ ನಲ್ಲಿ ನಡೆದಿರೋ ಅಕ್ರಮಗಳ ಬಗ್ಗೆ ವರದಿ ತಯಾರಿಸಲು ಸರ್ಕಾರ 2012ರ ಕೊನೆಯಲ್ಲಿ ಐಎಎಸ್ ಅಧಿಕಾರಿಗಳ ಸಮಿತಿ ರಚನೆ ಮಾಡಿತ್ತು. ನಂತರ 2013ರಲ್ಲಿ ಆ ಸಮಿತಿಯ ವರದಿಯಲ್ಲಿ ಉನ್ನತ ಅಧಿಕಾರಿಗಳು ಅಕ್ರಮ ಎಸಗಿರುವುದು ಸಾಬೀತಾಗಿದೆ ಎಂದು ಉಲ್ಲೇಖವಾಗಿತ್ತು. ಆದರೆ 4 ವರ್ಷದಿಂದ ಕ್ರಮ ಕೈಗೊಳ್ಳದ ಸರ್ಕಾರ ಈಗ ಕ್ರಮ ಕೈಗೊಳ್ಳುತ್ತಿರುವುದರ ಹಿಂದಿನ ದ್ದೇಶವೇನು ಎಂದು ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಲ್.ಬೋಜೇಗೌಡ ಪ್ರಶ್ನಿಸಿದ್ದಾರೆ.
ಐಎಎಸ್ ಅಧಿಕಾರಿ ಉಮೇಶ್ ನೇತೃತ್ವದ ತಂಡ ವರದಿ ಸಲ್ಲಿಸಿ ನಾಲ್ಕು ವರ್ಷ ಕಳೆದ್ರು ವರದಿ ಜಾರಿಯಾಗಿಲ್ಲ. ಇನ್ನು ಸರ್ಕಾರ ನಾಲ್ಕು ವರ್ಷ ಕಳೆದ ಮೇಲೆ ಎಸಿಬಿಯಲ್ಲಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದು ರಾಜಕೀಯ ಗಿಮಿಕ್ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಬೋಜೆಗೌಡ, ಬಿಜೆಪಿಯು ರಸ್ತೆಯಲ್ಲಿ ಹೋರಾಟ ಮಾಡುವ ಮೂಲಕ ತಮ್ಮ ನಾಯಕರನ್ನು ರಕ್ಷಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.