ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಧರ್ಮಸ್ಥಳಕ್ಕೆ ಪಾದಯಾತ್ರೆ

JDS Workers Gos To Dharmasthala
Highlights

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎನ್ನುವ ಉದ್ದೇಶದಿಂದ ಯುವಕರು ಧರ್ಮಸ್ಥಳಕ್ಕೆ ಪಾದ ಯಾತ್ರೆ ಕೈಗೊಂಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿ ಸದಸ್ಯ ನಂಜಯ್ಯ ಹೇಳಿದರು.

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎನ್ನುವ ಉದ್ದೇಶದಿಂದ ಯುವಕರು ಧರ್ಮಸ್ಥಳಕ್ಕೆ ಪಾದ ಯಾತ್ರೆ ಕೈಗೊಂಡಿರುವುದು ಸಂತಸ ತಂದಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಸಮಿತಿ ಸದಸ್ಯ ನಂಜಯ್ಯ ಹೇಳಿದರು.

ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿ ಎಂದು ಅಪೇಕ್ಷಿಸಿ ತಾಲೂಕಿನ ಬಾಚೇನಹಟ್ಟಿ ಗ್ರಾಮದ 15 ಯುವಕರು ಧರ್ಮಸ್ಥಳಕ್ಕೆ ಕೈಗೊಂಡಿರುವ ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ 20 ತಿಂಗಳ ಅವಧಿಯಲ್ಲಿ ರೈತರ ಸಾಲ ಮನ್ನಾ, ರಾಜ್ಯದಲ್ಲಿ ಸಾರಾಯಿ ಹಾಗೂ ಲಾಟರಿ ನಿಷೇಧ ಮಾಡಿದ್ದು, ಸುವರ್ಣಗ್ರಾಮ ಯೋಜನೆಯನ್ನು ಜಾರಿಗೆ ತಂದಿದ್ದರು.

ಅಂಗವಿಕಲ, ವೃದ್ಧಾಪ್ಯ ಹಾಗೂ ವಿಧವಾ ವೇತನವನ್ನು ಹೆಚ್ಚಿಸುವುದರ ಜೊತೆಗೆ ಸಂಧ್ಯಾ ಸುರಕ್ಷಾ ಯೋಜನೆಯನ್ನು ಜಾರಿಗೆ ತಂದಿದ್ದರು ಎಂದರು. ಹಲವು ಸೌಲಭ್ಯ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಬಿಸಿಯೂಟ ಜಾರಿಗೊಳಿಸುವ ಮೂಲಕ ಮಕ್ಕಳಿಗೆ, ವೃದ್ಧರಿಗೆ ಆಸರೆಯಾಗಿದ್ದರು. ಹೆಣ್ಣು ಮಕ್ಕಳಿಗೆ ಭಾಗ್ಯಲಕ್ಷ್ಮಿ ಯೋಜನೆ ತಂದು ಮಹಿಳಾ ಸಬಲೀಕರಣಕ್ಕೆ ಕಾರಣರಾಗಿದ್ದರು.

ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್ ಹಾಗೂ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಮೂಲಕ ಜನಪ್ರಿಯವಾದ ಆಡಳಿತವನ್ನು ನೀಡಿದ್ದ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯ ಮಂತ್ರಿಯಾಗಬೇಕು ಎನ್ನುವ ನಿಟ್ಟಿನಲ್ಲಿ ಬಾಚೇನಹಟ್ಟಿ ಗ್ರಾಮದ ಯುವಕರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಂಡಿರುವುದಾಗಿ ತಿಳಿಸಿದರು.

loader