ಖಚಿತ ಮಾಹಿತಿಯೊಂದಿಗೆ ವಿಮಾನವನ್ನು ಪರಿಶೀಲಿಸಿದ ಅಧಿಕಾರಿಗಳು 29ಲಕ್ಷ ಮೌಲ್ಯದ ಆಭರಣವನ್ನು ಪತ್ತೆಹಚ್ಚಿದ್ದಾರೆ.
ಮಂಗಳೂರು(ಜ.30): ಇಲ್ಲಿನ ಅಂತರ ರಾಷ್ಟ್ರೀಯ ವಿಮಾನದ ಶೌಚಾಲಯದಲ್ಲಿ ಲಕ್ಷಾಂತರ ಮೌಲ್ಯದ ಆಭರಣ ಪತ್ತೆಯಾಗಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ ಜೆಟ್ಏರ್‌ವೇಸ್ ವಿಮಾನದಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಪತ್ತೆಯಾಗಿದ್ದು, ಖಚಿತ ಮಾಹಿತಿಯೊಂದಿಗೆ ವಿಮಾನವನ್ನು ಪರಿಶೀಲಿಸಿದ ಅಧಿಕಾರಿಗಳು 29ಲಕ್ಷ ಮೌಲ್ಯದ ಆಭರಣವನ್ನು ಪತ್ತೆಹಚ್ಚಿದ್ದಾರೆ. ಆಭರಣವನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
