ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ ಟೌನ್ ಹಾಲ್ ಎದುರು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಪ್ರತಿಭಟನೆ ನಡೆಸುತ್ತಿದೆ.
ಬೆಂಗಳೂರು (ಏ. 04): ದಲಿತ ದೌರ್ಜನ್ಯ ತಡೆ ಕಾಯ್ದೆ ಸಡಿಲಗೊಳಿಸಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಖಂಡಿಸಿ ಟೌನ್ ಹಾಲ್ ಎದುರು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಯಲ್ಲಿ ಜಿಗ್ನೇಶ್ ಮೇವಾನಿ, ಬಿಟಿ ಲಲಿತಾ ನಾಯಕ್, ಸಿರಿಮನೆ ನಾಗರಾಜ್ ಭಾಗಿಯಾಗಿದ್ದಾರೆ. ದಲಿತ ದೌರ್ಜನ್ಯ ತಡೆ ಕಾಯ್ದೆ ಬದಲಾವಣೆ ಆದೇಶ ಹೊರಬೀಳುತ್ತಿದ್ದಂತೆ ಹೋರಾಟಗಳು ಶುರುವಾಗಿತ್ತು. ಸುಪ್ರೀಂಕೋರ್ಟ್ ಆದೇಶದ ಬೆನ್ನಲ್ಲೇ ದಲಿತ ಪರ ಸಂಘಟನೆಗಳು ಪ್ರತಿಭಟನೆಗಿಳಿದಿದ್ದವು. ಕಳೆದ ಸೋಮವಾರ ದಲಿತ ಸಂಘಟನೆಗಳ ಬಂದ್ ಕರೆ ವೇಳೆ ಅವಘಡ ಸಂಭವಿಸಿದ್ದು 9 ಮಂದಿ ದಲಿತರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದರು. ಹೀಗಾಗಿ ಕೇಂದ್ರ ಸರ್ಕಾರ ದಲಿತ ವಿರೋಧಿ ಎಂದು ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಟೌನ್ ಹಾಲ್ ಎದುರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ.
