Asianet Suvarna News Asianet Suvarna News

ದಲಿತರ ಮೇಲೆ ಹಿಂಸೆ: ಮೋದಿ ಮೌನ ಮುರಿಯಲಿ

  • ದಲಿತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು
  • ಗುಜರಾತ್ ಚುನಾವಣೆ ಬಳಿಕ ಬಿಜೆಪಿಗೆ ನನ್ನನ್ನು ಕಂಡರೆ ಭಯ. ಅದಕ್ಕಾಗಿಯೇ ನನ್ನನ್ನು ಗುರಿಯಾಗಿಸುತ್ತಿದೆ
Jignesh Mevani targets PM Modi asks him to break silence on violence against Dalits

ನವದೆಹಲಿ: ಮುಂಬೈಯಲ್ಲಿ ರ‍್ಯಾಲಿ ನಡೆಸಲು ಅನುಮತಿ ನಿರಾಕರಿಸಲ್ಪಟ್ಟ ಬೆನ್ನಲ್ಲೇ ಗುಜರಾತ್ ಶಾಸಕ ಹಾಗೂ ಯುವ ನಾಯಕ ಜಿಗ್ನೇಶ್ ಮೇವಾನಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹಾರಾಷ್ಟ್ರದಲ್ಲಿ ದಲಿತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮೇವಾನಿ ಆಗ್ರಹಿಸಿದ್ದಾರೆ.

ತನ್ನ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಮೇವಾನಿ, ನನ್ನ ಭಾಷಣದಲ್ಲಿ ಒಂದೇ ಒಂದು ಪ್ರಚೋದನಕಾರಿ ಶಬ್ಧ ಬಳಸಿಲ್ಲ, ನನ್ನನು ಕೇಂದ್ರ ಸರ್ಕಾರ ಗುರಿಯಾಗಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಗುಜರಾತ್ ಚುನಾವಣೆ ಬಳಿಕ ಬಿಜೆಪಿಗೆ ನನ್ನನ್ನು ಕಂಡರೆ ಭಯ. ಅದಕ್ಕಾಗಿಯೇ ನನ್ನನ್ನು ಗುರಿಯಾಗಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಭೀಮಾ ಕೋರೆಗಾಂವ್‌ ಯುದ್ಧದಲ್ಲಿ ದಲಿತರನ್ನು ಒಳಗೊಂಡ ಬ್ರಿಟಿಷ್‌ ಸೇನೆಯು ಮೇಲ್ಜಾತಿಯವರನ್ನು ಒಳಗೊಂಡ ಪೇಶ್ವೆ ಸೇನೆಯನ್ನು ಸೋಲಿಸಿದ್ದ ಸ್ಮರಣಾರ್ಥ ಜನವರಿ 1ರಂದು ವಿಜಯೋತ್ಸವ ಆಯೋಜಿಸಲಾಗಿತ್ತು.  ಈ ವೇಳೆ ಬಲಪಂಥೀಯ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತ್ತು ಹಾಗೂ ಓರ್ವ ಮೃತಪಟ್ಟಿದ್ದನು.

ಹಿಂಸಾಚಾರಕ್ಕೆ ಜಿಗ್ನೇಶ್ ಮೇವಾನಿ ಹಾಗೂ ಉಮರ್ ಖಾಲಿದ್ ಪ್ರಚೋದನಕಾರಿ ಭಾಷಣಗಳು ಕಾರಣವೆಂದು ಅವರ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ  ಜ.3ರಂದು ದಲಿತ ಸಂಘಟನೆಗಳು ಮಹಾರಾಷ್ಟ್ರ ಬಂದ್’ಗೆ ಕರೆ ನೀಡಿದ್ದವು.

1 ಜನವರಿ 1818ರಂದು ಭೀಮಾ ಕೋರೆಗಾಂವ್ ನಡೆದ ಕದನವು ಮೇಲ್ಜಾತಿಯವರ ವಿರುದ್ಧ ದಲಿತ-ಶೋಷಿತರ ವಿಜಯವಾಗಿತ್ತು ಎಂದು ದಲಿತ ಮುಖಂಡ ಹಾಗೂ ಚಿಂತಕರು ಅಭಿಪ್ರಾಯಪಡುತ್ತಾರೆ.

Follow Us:
Download App:
  • android
  • ios