ನವದೆಹಲಿ[ಮೇ.17]: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಾವಿನ ಬೆನ್ನಲ್ಲೇ ಹಲವಾರು ಅನುಮಾನಗಳು ವ್ಯಕ್ತವಾಗಿವೆ.

ಸ್ನಾತಕೋತ್ತರ ಶಿಕ್ಷಣ ಪಡೆಯುತ್ತಿದ್ದ ರಿಷಿ ಥಾಮಸ್ ಹೆಸರಿನ ವಿದ್ಯಾರ್ಥಿ, ವಿಶ್ವವಿದ್ಯಾನಿಲಯದ ಲೈಬ್ರರಿ ಹೊರಗಿರುವ ರೀಡಿಂಗ್ ರೂಂನಲ್ಲಿ ನೇಣು ಹಾಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ.  ಸುದ್ದಿ ತಿಳಿಯುತ್ತಿದ್ದಂತೆಯೇ ಇಲ್ಲಿನ ಆಡಳಿತ ಮಂಡಳಿ ಮಧ್ಯಾಹ್ನ ಸುಮಾರು 1 ಗಂಟೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಧ್ಯಾಪಕರಿಗೆ ಕಾರಣಗಳನ್ನು ವಿವರವಾಗಿ ತಿಳಿಸುವ ಈಮೇಲ್ ಒಂದನ್ನೂ ಕಳುಹಿಸಿದ್ದಾನೆ ಎನ್ನಲಾಗಿದೆ. ಆದರೆ ಈ ಕಾರಣಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.