ದೆಹಲಿಯ ಜೆಎನ್ಯುನಲ್ಲಿ ನಾಪತ್ತೆಯಾಗಿರುವ ವಿದ್ಯಾರ್ಥಿ ನಜೀಬ್ ಪತ್ತೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧರಣಿಯಲ್ಲಿ ಕಾಣೆಯಾಗಿರುವ ವಿದ್ಯಾರ್ಥಿ ನಜೀಬ್ ತಾಯಿ ಭಾಗಿಯಾದರು.
ದೆಹಲಿ (ನ.06): ದೆಹಲಿಯ ಜೆಎನ್ಯುನಲ್ಲಿ ನಾಪತ್ತೆಯಾಗಿರುವ ವಿದ್ಯಾರ್ಥಿ ನಜೀಬ್ ಪತ್ತೆಗೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಧರಣಿಯಲ್ಲಿ ಕಾಣೆಯಾಗಿರುವ ವಿದ್ಯಾರ್ಥಿ ನಜೀಬ್ ತಾಯಿ ಭಾಗಿಯಾದರು.
ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಮುಂದಾಗಿದ್ದು ಈ ವೇಳೆ ಪೊಲೀಸರು-ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ನಜೀಬ್ ತಾಯಿ ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಪೋಲಿಸರು ಬಂಧಿಸಿದ್ದಾರೆ.
ನಜೀಬ್ ತಾಯಿಯನ್ನು ಬಂಧಿಸಿ ಧರಣಿ ಸ್ಥಳದಿಂದ ಎಳೆದೊಯ್ದ ಪೊಲೀಸರ ಕ್ರಮ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ನಡೆದಿದ್ದೇನು?
ಎಬಿವಿಪಿ ಸಂಘಟನೆಯೊಂದಿಗೆ ನಜೀಬ್ ಜಗಳ ಮಾಡಿಕೊಂಡಿದ್ದು ಹಾಸ್ಟೆಲ್‌ಗೆ ನುಗ್ಗಿ ಆತನ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ನಂತರ ನಜೀಬ್ ನಿಗೂಢವಾಗಿ ನಾಪತ್ತೆಯಾಗಿದ್ದರು. ನಜೀಬ್ ಎಂಎಸ್ಸಿ ಬಯೋಟೆಕ್ನಾಲಜಿ ವಿಭಾಗದ ವಿದ್ಯಾರ್ಥಿಯಾಗಿದ್ದರು.
