ಹಿರಿಯ ಪತ್ರಕರ್ತ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿದೆ. ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು, [ಸೆ.22]: ಹಿರಿಯ ಪತ್ರಕರ್ತ ರವಿ ಬೆಳಗೆರೆ ಆರೋಗ್ಯದಲ್ಲಿ ಏರುಪೇರಾಗಿದೆ. ನಿನ್ನೆ ರಾತ್ರಿ [ಶುಕ್ರವಾರ] ರವಿ ಬೆಳಗೆರೆ ಅವರಿಗೆ ಲಘು ಹೃದಯಾಘಾತವಾಗಿದ್ದು, ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ರವಿ ಬೆಳಗೆರೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

 ಕೆಲ ತಿಂಗಳಿಂದ ಅಷ್ಟೇ ರವಿ ಬೆಳಗೆರೆ ಅವರು ಇದೇ ಹೃದಯ ಸಂಬಂಧಿ ಕಾಯಿಲೆಗೆ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.