ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ತನ್ನ ಪರಿವಾರಕ್ಕೆ ಮೇಜರ್ ಸರ್ಜರಿ ಮಾಡುವ ಮೊದಲ ಹಂತವನ್ನು ತೋರಿಸಿದಂತೆ ಕಾಣುತ್ತಿದೆ. ಜೆಪಿ ನಡ್ಡಾ ಬಿಜೆಪಿ ಕಾರ್ಯಾಧ್ಯಕ್ಷರಾಗಿ ನಿಯೋಜನೆಗೊಂಡಿದ್ದಾರೆ.

ನವದೆಹಲಿ[ಜೂ. 17] ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋಮವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ನಡ್ಡಾ ನೇಮಕವನ್ನು ರಾಜನಾಥ್ ಸಿಂಗ್ ಪ್ರಕಟ ಮಾಡಿದ್ದಾರೆ.

ಅಮಿತ್ ಶಾ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಬೇರೆಯವರನ್ನು ನೇಮಕ ಮಾಡುವ ಮಾತುಗಳು ಕೇಳಿ ಬಂದಿದ್ದವು. ಇದೀಗ ಬಿಜೆಪಿ ಸಂಸದೀಯ ಮಂಡಳಿ ಜೆಪಿ ನಡ್ಡಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಹಾಗಾಗಿ ಅಮಿತ್ ಶಾ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ.