ಭೋಪಾಲ್ [ಜು.07]: ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಕರ್ನಾಟಕ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಜೋರಾಗುತ್ತಿರುವ ಬೆನ್ನಲ್ಲೇ ಸಿಂಧಿಯಾ ರಾಜೀನಾಮೆ ಪಕ್ಷಕ್ಕೆ ಆಘಾತ ನೀಡಿದೆ. 

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರೀ ಹಿನ್ನಡೆ ಅನುಭವಿಸಿದ ಹಿನ್ನೆಲೆ ಎಐಸಿಸಿ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದು, ಈ ನಿಟ್ಟಿನಲ್ಲಿ ಸಿಂಧಿಯಾ ಕೂಡ ಸ್ಥಾನ ತೊರೆದಿದ್ದಾರೆ. 

ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಕೂಡ ಇತ್ತೀಚೆಗಷ್ಟೇ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು.  ಕಾಂಗ್ರೆಸ್ ಹಿರಿಯ ನಾಯಕರಾದ ದೀಪಕ್ ಬಾಬ್ರಿಯಾ, ವಿವೇಕ್ ತಂಡ ಕೂಡ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. 

ಸದ್ಯ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ರಾಜೀನಾಮೆ ನೀಡಿದ್ದು, ಈ  ಎಲ್ಲಾ ರಾಜೀನಾಮೆಗಳು ಅಧ್ಯಕ್ಷರಿಂದಲೇ ಅಂಗೀಕಾರವಾಗಬೇಕಿದೆ. ನೂತನ ಅಧ್ಯಕ್ಷರ ನೇಮಕವಾಗಿ ಅಂಗೀಕಾರವಾಗುವವರೆಗೂ ಈ ಎಲ್ಲರೂ ತಮ್ಮ ಹುದ್ದೆಗಳಲ್ಲಿ ಮುಂದುವರಿಯಲಿದ್ದಾರೆ.