ಸಿಎಂ ಸಿದ್ದರಾಮಯ್ಯ ವಿರುದ್ಧ ಹೋದಲ್ಲೆಲ್ಲಾ ವಾಗ್ದಾಳಿ ನಡೆಸುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಕಾಗಿನೆಲೆ ಸಂಸ್ಥಾನದ ಶ್ರೀ ನಿರಂಜನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಆನೇಕಲ್ (ಡಿ.17): ಸಿಎಂ ಸಿದ್ದರಾಮಯ್ಯ ವಿರುದ್ಧ ಹೋದಲ್ಲೆಲ್ಲಾ ವಾಗ್ದಾಳಿ ನಡೆಸುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಕಾಗಿನೆಲೆ ಸಂಸ್ಥಾನದ ಶ್ರೀ ನಿರಂಜನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಹಾಲುಮತ ಸಮುದಾಯ ಅನಂತಕುಮಾರ್ ಹೆಗಡೆ ಮಾತುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತದೆ. ಇದೇ ರೀತಿ ಸಿದ್ದರಾಮಯ್ಯ ವಿರುದ್ಧ ಮಾತನಾಡುತ್ತಿದ್ದರೆ ಮುಂದಿನ ದಿನಗಳಲ್ಲಿ ಅನಂತಕುಮಾರ್ ಹೆಗಡೆಗೆ ಕುರುಬ ಸಮುದಾಯ ತಕ್ಕ ಪಾಠ ಕಲಿಸಿದೆ ಎಂದು ಸಿಎಂ ಬೆಂಬಲಕ್ಕೆ ನಿಂತು ಮಾತನಾಡಿದ್ದಾರೆ.