ತಿರುವನಂತಪುರಂ(ಏ.22): ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ, ಖಾಸಗಿ ಪ್ರಯಾಣಿಕ ಸಾರಿಗೆ ಸಂಸ್ಥೆ ಕಲ್ಲಡ ಟ್ರಾವೆಲ್ಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ತಿರುವನಂತಪುರಂನಿಂದ ಬೆಂಗಳೂರಿಗೆ ಬರುತ್ತಿದ್ದ ಕಲ್ಲಡ ಟ್ರಾವೆಲ್ಸ್ ಬಸ್ ಅಲ್ಲಪುಜಾ ಬಳಿ ಕೆಟ್ಟು ನಿಂತಿದೆ. ಈ ವೇಳೆ ಮತ್ತೊಂದು ಬಸ್ ನಲ್ಲಿ ಪರಯಾಣಿಕರನ್ನು ವೈತಿಲಾಗೆ ಕರೆತರಲಾಗಿದೆ.

"

ಇದನ್ನು ಪ್ರಶ್ನಿಸಿದ ಇಬ್ಬರು ಪ್ರಯಾಣಿಕರ ಮೇಲೆ ಬಸ್ ಸಿಬ್ಬಂದಿ ಹಲ್ಲೆ ನಡೆಸಿದ್ದು, ಪ್ರಯಾಣಿಕರೋರ್ವರು ಹಲ್ಲೆಯ ವಿಡಿಯೋ ಮಾಡಿದ್ದಾರೆ. 

ಸದ್ಯ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಸಿಬ್ಬಂದಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.