ಕೆಲ ದಿನಗಳ ಹಿಂದಷ್ಟೇ ಸ್ವಾಮೀಜಿ ಮಹಿಳೆಯೊಂದಿಗೆ ಇದ್ದ ವಿಡಿಯೋ ವೈರಲ್ ಆಗಿದ್ದು, ಇದೀಗ ಮತ್ತೊಮ್ಮೆ ಸಿಕ್ಕಿ ಬಿದ್ದಿದ್ದಾರೆ. ಮಠದಲ್ಲೇ ಮಹಿಳೆ ಚಿನ್ನಾಭರಣ ನೀಡಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. 

ಕೊಪ್ಪಳ : ಕಲ್ಮಠದ ಕೊಟ್ಟೂರ ಸ್ವಾಮೀಜಿಯ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಸ್ವಾಮೀಜಿ ಮಠದಲ್ಲೇ ಮಹಿಳೆಗೆ ಚಿನ್ನಾಭರಣಗಳನ್ನು ಕೊಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಇಲ್ಲಿನ ಕಲ್ಮಠದ ಸ್ವಾಮೀಜಿ ಕಳೆದ ಕೆಲ ದಿನಗಳ ಹಿಂದೆ ಮಹಿಳೆಯೊಂದಿಗೆ ಇದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮಠದಲ್ಲೇ ಮಹಿಳೆಗೆ ಚಿನ್ನಾಭರಣಗಳನ್ನು ಕೊಟ್ಟಿದ್ದಾರೆ. 

ಕೊಪ್ಪಳ‌ ಜಿಲ್ಲೆಯ ಗಂಗಾವತಿಯ ಕಲ್ಮಠದ ಕೊಟ್ಟೂರ ಸ್ವಾಮಿಜಿ ಈ ರೀತಿಯ ವಿವಾದಕ್ಕೆ ಒಳಗಾಗಿದ್ದು, ಮಹಿಳೆಯರ ವಿಚಾರದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಇಂತಹ ಘಟನೆಗಳಿಂದ ಸ್ವಾಮೀಜಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.