ಲೋಕಸಭಾ ಚುನಾವಣೆ ಇನ್ನೇನು ಸಮೀಪಿಸುತ್ತಿದ್ದು, ಈ ನಿಟ್ಟಿನಲ್ಲಿ ವಿವಿಧ ಪಕ್ಷಗಳು ತಯಾರಿಯಲ್ಲಿ ತೊಡಗಿವೆ. ಇದೇ ವೇಳೆ ರಾಜಕೀಯ ಪಕ್ಷ ಸ್ಥಾಪಿಸಿದ ಕಮಲ್ ಹಾಸನ್ ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಹೇಳಿದ್ದಾರೆ. 

ಚೆನ್ನೈ: ತಮಿಳುನಾಡಿನ ರಾಜಕಾರಣದಲ್ಲಿ ಬದಲಾವಣೆ ತರುವ ಗುರಿಯೊಂದಿಗೆ ಕಳೆದ ಫೆಬ್ರವರಿಯಲ್ಲಿ ‘ಮಕ್ಕಳ್‌ ನೀಧಿ ಮಯ್ಯಂ’ ಪಕ್ಷ ಸ್ಥಾಪಿಸಿದ್ದ ಹೆಸರಾಂತ ಚಿತ್ರನಟ ಕಮಲ್‌ಹಾಸನ್‌ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಮಿತ್ರಪಕ್ಷಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

Add Asianetnews Kannada as a Preferred SourcegooglePreferred

ಲೋಕಸಭೆ ಚುನಾವಣೆಯಲ್ಲಿ ಯಾರ ಜತೆ ಮೈತ್ರಿ ಮಾಡಿಕೊಳ್ಳಬೇಕು ಎಂಬ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಪಕ್ಷ ತಮಗೆ ನೀಡಿದೆ ಎಂದು ಪಕ್ಷದ ಸಂಸ್ಥಾಪಕರಾಗಿರುವ ಕಮಲ್‌ಹಾಸನ್‌ ಅವರು ಶನಿವಾರ ತಿಳಿಸಿದ್ದಾರೆ. ಅವರ ಈ ಹೇಳಿಕೆ, ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಕಮಲ್‌ ಹಿಂಜರಿಯುತ್ತಿರುವುದರ ಸಂಕೇತ ಎಂದು ಹೇಳಲಾಗುತ್ತಿದೆ.

ಡಿಎಂಕೆ ತೊರೆದು ಬಂದರೆ ಕಾಂಗ್ರೆಸ್‌ ಪಕ್ಷದ ಜತೆ ಮೈತ್ರಿಗೆ ಸಿದ್ಧವಿರುವುದಾಗಿ ಈ ಹಿಂದೆ ಕಮಲ್‌ ಹೇಳಿದ್ದರು. ಆದರೆ ಡಿಎಂಕೆ ಜತೆಗಿನ ಸಂಬಂಧ ಕಡಿದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿತ್ತು. ಇದೇ ವೇಳೆ, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಕಮಲ್‌ಗೆ ಇಷ್ಟವಿಲ್ಲ. ಹೀಗಾಗಿ ಅವರು ಲೋಕಸಭೆ ಚುನಾವಣೆಯಲ್ಲಿ ಯಾರ ಜತೆ ಹೋಗಲಿದ್ದಾರೆ ಎಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.