ಈ ಗ್ರಂಥದಲ್ಲಿ ಮಹಿಳೆಯನ್ನು ಒಂದು ವಸ್ತುವಾಗಿ ಬಳಸಿಕೊಳ್ಳುತ್ತಿದ್ದೇವೆ ಎಂದು ಟಿವಿಯೊಂದಕ್ಕೆ ನೀಡಿದ ಸಂದರ್ಶನದ ವೇಳೆ ಹೇಳಿದ್ದಾರೆ.

ಚೆನ್ನೈ(ಮಾ.21): ಬಹುಭಾಷಾ ನಟ ಕಮಲ್ ಹಾಸನ್ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೂಜಾಟ ಆಧಾರಿತ ಮಹಾಭಾರತ ಗ್ರಂಥವನ್ನು ನಾವು ಗೌರವಿಸುತ್ತಿದ್ದೇವೆ ಎನ್ನುವ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಈ ಸಂಬಂಧ ತಮಿಳುನಾಡಿನ ತಿರುನಲ್ವೆಲಿಯಲ್ಲಿ ಕಮಲ್ ಹಾಸನ್ ವಿರುದ್ಧ ದೂರು ದಾಖಲಾಗಿದೆ. ಮಹಾಭಾರತದಲ್ಲಿ ದ್ರೌಪದಿಯನ್ನು ಜೂಜಿನಲ್ಲಿ ಪಣಕ್ಕೆ ಇಡಲಾಗುತ್ತೆ. ಈ ಗ್ರಂಥದಲ್ಲಿ ಮಹಿಳೆಯನ್ನು ಒಂದು ವಸ್ತುವಾಗಿ ಬಳಸಿಕೊಳ್ಳುತ್ತಿದ್ದೇವೆ ಎಂದು ಟಿವಿಯೊಂದಕ್ಕೆ ನೀಡಿದ ಸಂದರ್ಶನದ ವೇಳೆ ಹೇಳಿದ್ದಾರೆ. ಈ ಮಾತು ಭಾರೀ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ.