ಬೆಂಗಳೂರು (ಫೆ.08): ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಎದುರಾಗಿರುವ ಅಡ್ಡಿ ನಿವಾರಿಸಲು ಸರ್ಕಾರ ಮಸೂದೆ ಸಿದ್ಧಪಡಿಸಿದ್ದು, ಗುರುವಾರ ಸದನದಲ್ಲಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ಬೆಂಗಳೂರು (ಫೆ.08): ಸಾಂಪ್ರದಾಯಿಕ ಕ್ರೀಡೆ ಕಂಬಳಕ್ಕೆ ಎದುರಾಗಿರುವ ಅಡ್ಡಿ ನಿವಾರಿಸಲು ಸರ್ಕಾರ ಮಸೂದೆ ಸಿದ್ಧಪಡಿಸಿದ್ದು, ಗುರುವಾರ ಸದನದಲ್ಲಿ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.
ವಿಧಾನಸಭೆಯಲ್ಲಿ ಈ ಬಗ್ಗೆ ಸರ್ಕಾರದ ಗಮನ ಸೆಳೆದ ಕಾಂಗ್ರೆಸ್‌ನ ಅಭಯ್ ಚಂದ್ರ ಜೈನ್ ಸರ್ಕಾರ ತಮಿಳುನಾಡಿನ ಮಾದರಿಯಲ್ಲಿ ರಾಜ್ಯದಲ್ಲೂ ಸುಗ್ರೀವಾಜ್ಞೆ ಹೊರಡಿಸಿ ಕಂಬಳ ಕ್ರೀಡೆಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಜಯಚಂದ್ರ, ಸದ್ಯ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವುದರಿಂದ ಈ ಹಂತದಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮಸೂದೆಯನ್ನೇ ಮಂಡಿಸಿ ಜಾರಿಗೊಳಿಸಲಿದೆ ಎಂದರು. ಕಂಬಳ ಕ್ರೀಡೆ, ಎತ್ತಿನ ಬಂಡಿ ಓಟ ನಡೆಸಲು ಅನುಕೂಲವಾಗುವಂತೆ ಪ್ರಾಣಿ ಹಿಂಸೆ ನಿಷೇಧ ಕಾಯ್ದೆ 1960 ಕ್ಕೆ ತಿದ್ದುಪಡಿ ತರುವ ಮಸೂದೆ ಮಂಡನೆಗೆ ನಿರ್ಧಾರವಾಗಲಿದೆ ಎಂದು ಸಚಿವರು ಹೇಳಿದರು.