Asianet Suvarna News Asianet Suvarna News

ಸನ್ನಿ ಲಿಯೋನ್‌ಗೆ ಇದೆಂಥಾ ಸೇವೆ..!

ಮಾಜಿ ನೀಲಿ ಚಿತ್ರ ತಾರೆ ಬಾಲಿವುಡ್ ನಟಿ ವಿರುದ್ಧ ಮತ್ತೊಮ್ಮೆ ಬೆಂಗಳೂರಲ್ಲಿ ಪ್ರತಿಭಟನೆ ನಡೆದಿದೆ.

Kannada activists staged a protest for opposing SunnyLeone Acting VeeraMahadevi Film
Author
Bengaluru, First Published Oct 8, 2018, 3:03 PM IST
  • Facebook
  • Twitter
  • Whatsapp

ಬೆಂಗಳೂರು, (ಅ.08): ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ವೀರ ಮಹಾದೇವಿ ಚಿತ್ರಕ್ಕೆ ವಿರೋಧಗಳು ವ್ಯಕ್ತವಾಗುತ್ತಿವೆ.

ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಲಿಯೋನ್ ನಟಿಸಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಕಾರ್ಯಕರ್ತರು ಬೆಂಗಳೂರಿನ ಮೌರ್ಯ ಸರ್ಕಲ್ ಬಳಿ ಪ್ರತಿಭಟನೆ ನಡೆಸಿದರು.

ಬೇಡಾ.. ಬೇಡಾ... ಸನ್ನಿ ಲಿಯೋನ್ 'ವೀರಮಹಾದೇವಿ' ಆಗೋದು ಬೇಡ

ವೀರ ಮಹಾದೇವಿ ಐತಿಹಾಸಿಕ ಚಿತ್ರವಾಗಿದೆ. ಹೀಗಾಗಿ ಈ ಚಿತ್ರದಲ್ಲಿ ನೀಲಿ ತಾರೆ ಸನ್ನಿ ಲಿಯೋನ್ ನಟಿಸಬಾರದು ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಪ್ರತಿಭಟನೆಯಲ್ಲಿ ಸನ್ನಿಲಿಯೋನ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ವೀರ ಮಹಾದೇವಿ ಚಿತ್ರ ಪಂಚ ಭಾಷೆಗಳಲ್ಲಿ ತಯಾರಾಗುತ್ತಿದ್ದು, ಒಟ್ಟು 100 ಕೋಟಿ ವೆಚ್ಚದಲ್ಲಿ ಈ ಸಿನಿಮಾ ನಿರ್ಮಾಣ ಹಂತದಲ್ಲಿದ್ದು, ಸನ್ನಿ ಮುಖ್ಯ ಪ್ರಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನವೆಂಬರ್ 3 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಸನ್ನಿ ನೈಟ್ ಹೆಸರಿನಲ್ಲಿ ಕಾರ್ಯಕ್ರಮವೊಂದನ್ನು ಆಯೋಜನೆ ಮಾಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಸನ್ನಿ, ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಲಿದ್ದು, ಇದಕ್ಕೂ ಸಹ ವಿರೋಧಗಳು ವ್ಯಕ್ತವಾಗಿದ್ದವು. ಆದರೆ, ಇದಕ್ಕೆ ಪೊಲೀಸರು ಅನುಮತಿ ನೀಡಿದ್ದಾರೆ.

Follow Us:
Download App:
  • android
  • ios