ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಜನರ ಕೂಗು ಕೇಳಿಸಿಕೊಳ್ಳದ ಅವರಿಗೆ ಚುನಾವಣೆ ತಕ್ಕ ಪಾಠ ಕಲಿಸಿದೆ. ಮುಂದೆ ಯೋಜನೆ ವಿರೋಧಿಸುವವರೂ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಹುಬ್ಬಳ್ಳಿ(ಮಾ.11): ಕಳಸಾ ಬಂಡೂರಿ ಯೋಜನೆ ಸಂಬಂಧ ಮಾತುಕತೆಗೆ ವಿಳಂಬ ಮಾಡಿದ್ದ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೇಕರ್ ಅವರು ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದಕ್ಕೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಶನಿವಾರ ಸಂಭ್ರಮಾಚರಣೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಪರ್ಸೇಕರ್ ಅವರ ವಿರುದ್ಧ ಘೋಷಣೆ ಕೂಗಿ, ಪ್ರತಿಕೃತಿ ದಹಿಸಿದರಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ ಮಾತನಾಡಿದ ಕಾರ್ಯಕರ್ತರು, ಪರ್ಸೇಕರ್ ಅವರು ಕಳಸಾ-ಬಂಡೂರಿ ಯೋಜನೆಗೆ ಅಡ್ಡಗಾಲು ಹಾಕಿದ್ದರು. ಉತ್ತರ ಕರ್ನಾಟಕದ ಜನ ಕುಡಿಯುವ ನೀರಿಗಾಗಿ ನಿರಂತರ ಹೋರಾಟ ಮಾಡಿದರೂ ಸ್ಪಂದಿಸಿರಲಿಲ್ಲ. ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಜನರ ಕೂಗು ಕೇಳಿಸಿಕೊಳ್ಳದ ಅವರಿಗೆ ಚುನಾವಣೆ ತಕ್ಕ ಪಾಠ ಕಲಿಸಿದೆ. ಮುಂದೆ ಯೋಜನೆ ವಿರೋಧಿಸುವವರೂ ಇದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗೋವಾ ವಿಧಾನಸಭೆ ಚುನಾವಣೆಯಲ್ಲಿ ನಿರ್ಗಮಿತ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್ ಸೋತಿದ್ದಕ್ಕೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಹುಬ್ಬಳ್ಳಿಯಲ್ಲಿ ಸಂಭ್ರಮ ಆಚರಿಸಿದರು.