ಬ್ಯಾಂಕಿಂಗ್ ಕ್ಷೇತ್ರದ ನೇಮಕಾತಿಗಳಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಪ್ರಧಾನಮಂತ್ರಿ ಹಾಗೂ ವಿತ್ತ ಸಚಿವರ ಭೇಟಿಗಾಗಿ ನವ ದೆಹಲಿಗೆ ತೆರಳಿರುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವ ನಿಯೋಗ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಬೆಂಗಳೂರು(ಸೆ.08): ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕನ್ನಡೇತರ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ.
ಬ್ಯಾಂಕಿಂಗ್ ಕ್ಷೇತ್ರದ ನೇಮಕಾತಿಗಳಲ್ಲಿ ಸ್ಥಳೀಯರಿಗೆ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಪ್ರಧಾನಮಂತ್ರಿ ಹಾಗೂ ವಿತ್ತ ಸಚಿವರ ಭೇಟಿಗಾಗಿ ನವ ದೆಹಲಿಗೆ ತೆರಳಿರುವ ಕನ್ನಡ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವ ನಿಯೋಗ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆ ವೇಳೆ, ಕಚೇರಿಯಲ್ಲಿ ಹೊರಗುತ್ತಿಗೆಯಲ್ಲಿ ಕನ್ನಡೇತರರ ನೇಮಕವನ್ನು ಗಂಭೀರವಾಗಿ ಪರಿಗಣಿಸಿತು.
ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 224 ಸಿಬ್ಬಂದಿಗಳ ಪೈಕಿ ಕೇವಲ 16 ಜನ ಮಾತ್ರ ಕನ್ನಡಿಗರಿದ್ದಾರೆ. ಇಲ್ಲಿಯೂ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ 3 ತಿಂಗಳೊಳಗೆ ಕನ್ನಡೇತರ ನೌಕರರನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಸೂಚಿಸಿತು.
