ಭೀಕರ ಅಪಘಾತ : ನಿರೂಪಕ ಚಂದನ್ ಸಾವು
ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿದ್ದ ಚಂದನ್ [ಚಂದ್ರಶೇಖರ್ ] ದಾವಣಗೆರೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ದಾವಣಗೆರೆ : ಖಾಸಗಿ ವಾಹಿನಿಯಲ್ಲಿ ನಿರೂಪಕರಾಗಿದ್ದ ಚಂದನ್ [ಚಂದ್ರಶೇಖರ್ ] ದಾವಣಗೆರೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಚಂದನ್ ಹಾಗೂ ಸಂತೋಷಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ದಾವಣಗೆರೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚಂದನ್ ಉದಯ ಮ್ಯೂಸಿಕ್, ಕಸ್ತೂರಿ ಸೇರಿದಂತೆ ವಿವಿಧ ಖಾಸಗಿ ವಾಹಿನಿಗಳಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಸುಲಲಿತವಾಗಿ ಕನ್ನಡ ಮಾತನಾಡುತ್ತಿದ್ದ ಅವರು ಕರ್ನಾಟಕದಾದ್ಯಂತ ಮನೆ ಮಾತಾಗಿದ್ದರು.
ದಾವಣಗೆರೆಯ ಹನಗವಾಡಿಯ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತವಾಗಿದೆ. ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ವೇಳೆ ರಸ್ತೆ ಪಕ್ಕಕ್ಕೆ ನಿಂತ ಲಾರಿಗೆ ಕಾರ್ ಡಿಕ್ಕಿ ಸಂಭವಿಸಿದೆ. ಈ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.