ಬೆಂಗಳೂರು: ರಾಜ್ಯದ 12000 ಕ್ಕೂ ಹೆಚ್ಚು ಶಾಲಾ ಶಿಕ್ಷಕರಿಗೆ 6 ತಿಂಗಳಿನಿಂದ ವೇತನ ಪಾವತಿಯಾಗದ ಸಮಸ್ಯೆಗೆ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಂದಿಸಿದ್ದಾರೆ. 

‘ರಾಜ್ಯದ 12 ಸಾವಿರ ಶಿಕ್ಷಕರಿಗೆ 6 ತಿಂಗಳಿನಿಂದ ವೇತನ ಇಲ್ಲ’ ಎಂಬ ಶೀರ್ಷಿಕೆಯಡಿ ‘ಕನ್ನಡಪ್ರಭ’ ವರದಿ ಪ್ರಕಟಿಸಿರುವುದನ್ನು ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಭಾಷಣಕ್ಕೂ ಮುನ್ನ ವೇದಿಕೆಯಲ್ಲಿ ಕುಳಿತು ಓದಿ ತಿಳಿದುಕೊಂಡ ಮುಖ್ಯಮಂತ್ರಿ ಗಳು, ಸ್ಥಳದಲ್ಲಿಯೇ ಫೋನಾಯಿಸಿದರು. 

ಹಣಕಾಸು ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಈ ಯೋಜನೆಗೆ ಕೇಂದ್ರ ಅನುದಾನ ನೀಡಿಲ್ಲ ಎಂದು ಅಧಿಕಾರಿಗಳು ಹೇಳು ತ್ತಿದ್ದಾರೆ. ಆದರೂ, ಶಿಕ್ಷಕರಿಗೆ ಕೂಡಲೇ ವೇತನ ನೀಡುವಂತೆ ಹಣಕಾಸು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.