ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಆರೋಪಗಳ ಸುರಿಮಳೆ ಗೈದಿದ್ದಾರೆ. ಇವತ್ತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಪಿಲ್ ಮಿಶ್ರಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ನವದೆಹಲಿ(ಮೇ.14): ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಆರೋಪಗಳ ಸುರಿಮಳೆ ಗೈದಿದ್ದಾರೆ. ಇವತ್ತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕಪಿಲ್ ಮಿಶ್ರಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರದ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್​​ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ. ನಕಲಿ ಕಂಪನಿಗಳು, ಹವಾಲಾ ದಂಧೆಕೋರರ ಜೊತೆ ಸಂಪರ್ಕ ಇದೆ. ಆಪ್​ ಸಚಿವರ ವಿದೇಶ ಪ್ರವಾಸದ ವೇಳೆ ಅವ್ಯವಹಾರ ನಡೆದಿದೆ. ಚುನಾವಣಾ ಆಯೋಗಕ್ಕೆ 36 ಕೋಟಿ ಲೆಕ್ಕದ ಬಗ್ಗೆ ಮಾಹಿತಿ ನೀಡಿಲ್ಲ. ಚುನಾವಣಾ ಆಯೋಗ, ಐಟಿಗೆ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಈ ಎಲ್ಲಾ ಅವ್ಯವಹಾರದ ಕುರಿತ ದಾಖಲೆಗಳ ನನ್ನ ಬಳಿ ಇದ್ದು ನಾಳೆ ಬೆಳಗ್ಗೆ ಸಿಬಿಐಗೆ ದಾಖಲೆಗಳನ್ನು ನೀಡುತ್ತೇನೆ ಅಂತ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಪಿಲ್ ಮಿಶ್ರಾ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ನಾನು ಯಾವುದೇ ಅಕ್ರಮವೆಸಗಿಲ್ಲ. ನನ್ನ ವಿರುದ್ಧದ ಮಾಡಲಾಗುತ್ತಿರುವ ಆರೋಪಗಳೆಲ್ಲ ಸುಳ್ಳು ಅಂತ ಹೇಳಿದ್ರು.

ಇನ್ನು ಸುದ್ಧಿಗೋಷ್ಠಿ ಬಳಿಕ ಎಎಪಿ ಮಾಜಿ ಸಚಿವ ಕಪಿಲ್ ಮಿಶ್ರಾ ಕುಸಿದು ಬಿದ್ದಿದ್ದಾರೆ. ಅಸ್ವಸ್ಥ ಕಪಿಲ್ ಮಿಶ್ರಾರನ್ನು ಌಂಬುಲೆನ್ಸ್​ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಕಪಿಲ್ ಮಿಶ್ರಾ ದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.