ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ MES ಮಹಾಮೇಳವನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ MES ಮಹಾಮೇಳವನ್ನು ವಿರೋಧಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
MES ಪದೇ ಪದೇ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದೆ ಎಂದು ಆರೋಪಿಸಿ, ಟೈರ್ಗೆ ಬೆಂಕಿ ಹಚ್ಚುವ ಮೂಲಕ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದರು.
ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕೆಲಕಾಲ ಕರವೇ ಕಾರ್ಯಕರ್ತರ ನಡುವೆ ವಾಗ್ವಾದ ಸಹ ನಡೆಯಿತು. ಬಳಿಕ ಪೊಲೀಸರು ನೂರಾರು ಕರವೇ ಕಾರ್ಯಕರ್ತರನ್ನು ಬಂಧಿಸಿದರು.
