2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.  ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಕೊಡುಗು ಮೂರನೇ ಸ್ಥಾನ ಪಡೆದಿದೆ. ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿದೆ. 

ಬೆಂಗಳೂರು : 2017-18 ನೇ ಸಾಲಿನ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 

ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಕೊಡುಗು ಮೂರನೇ ಸ್ಥಾನ ಪಡೆದಿದೆ. ಚಿಕ್ಕೋಡಿ ಕೊನೆಯ ಸ್ಥಾನ ಪಡೆದಿದೆ. 

ಈ ಬಾರಿ ಒಟ್ಟು ಶೇ.59.56 ರಷ್ಟು ಫಲಿತಾಂಶ ಬಂದಿದೆ. ಕಳೆದ ಬಾರಿಗಿಂತ ಈ ವರ್ಷ ಫಲಿತಾಂಶದಲ್ಲಿ ಹೆಚ್ಚಳ ಕಂಡು ಬಂದಿದೆ. 

ಶೇಕಡ ನೂರು ಫಲಿತಾಂಶ ಪಡೆದ ಕಾಲೇಜುಗಳ ಸಂಖ್ಯೆ 68. ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳ ಸಂಖ್ಯೆ 118. ಪರೀಕ್ಷೆಗೆ ಒಟ್ಟು 6 ಲಕ್ಷ 90 ಸಾವಿರ ವಿದ್ಯಾರ್ಥಿಗಳು ಹಾಜರಾಗಿದ್ದರು. 

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇ.91.49 ರಷ್ಟು ಫಲಿತಾಂಶ ಪಡೆದುಕೊಂಡು ಮೊದಲ ಸ್ಥಾನದಲ್ಲಿದ್ದು, ಶೇ. 90.67 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಉಡುಪಿ ಜಿಲ್ಲೆ 2ನೇ ಸ್ಥಾನವನ್ನು ಪಡೆದುಕೊಂಡಿದೆ. 

ಇನ್ನು ಕೊಡಗು ಶೇ.83.94 ಅಂಕಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ. 

ಈ ಬಾರಿ ಕಲಾ ವಿಭಾಗದಲ್ಲಿ ಶೇ.45.13 ಅಂಕಗಳು ಬಂದಿದ್ದು, ವಿಜ್ಞಾನ ವಿಭಾಗದಲ್ಲಿ ಶೇ.67.48 ಅಂಕಗಳು ಬಂದಿದೆ. ವಾಣಿಜ್ಯ ವಿಭಾಗದಲ್ಲಿ 63.64 ಅಂಕಗಳು ಬಂದಿವೆ.

ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಂದು ಇಂಡಿಪೆಂಡೆಂಟ್ ಪಿಯು ಕಾಲೇಜಿನ ಸ್ವಾತಿ 595 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 

ವಾಣಿಜ್ಯ ವಿಭಾಗದಲ್ಲಿ 595 ಅಂಕಗಳನ್ನು ಪಡೆದುಕೊಂಡು ಮಲ್ಲೇಶ್ವರಂ ವಿದ್ಯಾಮಂದಿರ ಪಿಯು ಕಾಲೇಜಿನ ವರ್ಷಿಣಿ ಎಂ ಭಟ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 

ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಸರ್ದಾರ್ ಪಟೇಲ್ ಪಿಯು ಕಾಲೇಜಿನ ಕೃತಿ ಮುತ್ತಗಿ 597 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 

ಪಿಯು ಫಲಿತಾಂಶವನ್ನು ಪಡೆದುಕೊಳ್ಳಲು ನೀವು www.pue.kar.nic.in ಭೇಟಿ ನೀಡಿ.