Asianet Suvarna News Asianet Suvarna News

ಸೀಡಿ ಕೇಸ್ ತನಿಖಾಧಿಕಾರಿ ಸೇರಿ 6 ಮಂದಿಗೆ ಕೇಂದ್ರ ಗೃಹ ಸಚಿವರ ಪದಕ

* ರಾಜ್ಯದ 6 ಪೊಲೀಸ್ ಅಧಿಕಾರಿಗಳಿಗೆ ಒಲಿದ ಕೇಂದ್ರ ಗೃಹ ಸಚಿವರ ಪದಕ

* ಸಿ.ಡಿ. ಸ್ಫೋಟ ಪ್ರಕರಣದ ತನಿಖಾಧಿಕಾರಿ ಎಚ್‌.ಎಂ.ಧರ್ಮೇಂದ್ರಗೂ ಒಲಿದ ಪದಕ

* ಅಪರಾಧ ಪ್ರಕರಣಗಳ ಉತ್ತಮ ತನಿಖೆಗೆ ನೀಡುವ ಪದಕವಿದು

Karnataka 6 Police Officers honoured Central Home Minister Medal  kvn
Author
Bengaluru, First Published Aug 13, 2021, 2:14 PM IST
  • Facebook
  • Twitter
  • Whatsapp

ಬೆಂಗಳೂರು(ಆ.13): ಅಪರಾಧ ಪ್ರಕರಣಗಳ ಉತ್ತಮ ತನಿಖೆಗೆ ನೀಡುವ ಕೇಂದ್ರ ಗೃಹ ಸಚಿವರ ಪದಕ-2021ಕ್ಕೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿ.ಡಿ. ಸ್ಫೋಟ ಪ್ರಕರಣದ ತನಿಖಾಧಿಕಾರಿ ಎಚ್‌.ಎಂ.ಧರ್ಮೇಂದ್ರ ಸೇರಿದಂತೆ ಆರು ಮಂದಿ ಪೊಲೀಸರು ಭಾಜನರಾಗಿದ್ದಾರೆ.

ಸಿಸಿಬಿ ಎಸಿಪಿ ಎಚ್‌.ಎನ್‌.ಧರ್ಮೇಂದ್ರ, ಮಂಗಳೂರು ಉಪ ವಿಭಾಗದ ಡಿವೈಎಸ್ಪಿ ಪರಮೇಶ್ವರ ಹೆಗಡೆ, ಬಿಡಿಎ ಡಿವೈಎಸ್ಪಿ ಸಿ.ಬಾಲಕೃಷ್ಣ, ಕೆಐಎ ಎಸ್‌ಐಟಿ ಮನೋಜ್‌ ಎನ್‌.ಹೂವಳೆ, ದಾವಣಗೆರೆ ಜಿಲ್ಲೆ ಹೊನ್ನಾಳಿ ಇನ್ಸ್‌ಪೆಕ್ಟರ್‌ ಟಿ.ವಿ.ದೇವರಾಜ್‌ ಹಾಗೂ ಹಳೆ ಹುಬ್ಬಳ್ಳಿ ಠಾಣೆ ಇನ್ಸ್‌ಪೆಕ್ಟರ್‌ ಶಿವಪ್ಪ ಶೆಟ್ಟಿಪ್ಪ ಕಮಟಗಿ ಅವರು ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ವಾರ ಸಭೆ: ಕೋವಿಡ್ ನಿಯಮ ಮತ್ತಷ್ಟು ಕಟ್ಟುನಿಟ್ಟು

ಮಂಗಳೂರು: ಅಗಸ್ಟ್ 15ರ ಬಳಿಕ ಬೆಂಗಳೂರಿನಲ್ಲಿ ಕೋವಿಡ್‌ ನಿಯಮ ಕಟ್ಟುನಿಟ್ಟು ವಿಚಾರಕ್ಕೆ ಸಂಬಂಧಿಸಿ ಮುಂದಿನ ವಾರ ಬೆಂಗಳೂರಿನಲ್ಲಿ ತಜ್ಞರ ಸಮಿತಿ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.

ಹೈಪ್ರೊಫೈಲ್ ವಂಚಕ ಯುವರಾಜ್ ಸ್ವಾಮಿ ವಿರುದ್ಧ ಚಾರ್ಜ್‌ಶೀಟ್; ಬೆಚ್ಚಿ ಬೀಳಿಸುವ ವಿವರ ಇದರಲ್ಲಿದೆ!

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ನಾವು ತಜ್ಞರ ಸಮಿತಿ ಸಭೆಯನ್ನು ಕಳೆದ ವಾರ ಮಾಡಿದ್ದೇವೆ.14 ದಿನಗಳ ಬಳಿಕ ಮತ್ತೆ ಮಾಡಬೇಕು. ಮುಂದಿನ ವಾರ ಸಭೆ ಮಾಡುತ್ತೇವೆ ಎಂದರು. ಆ ಸಭೆಯಲ್ಲಿ ಗಡಿ ಜಿಲ್ಲೆ ಅಷ್ಟೇ ಅಲ್ಲ, ಬೆಂಗಳೂರು ಸೇರಿದಂತೆ ರಾಜ್ಯದ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು. ಕೋವಿಡ್‌ ನಿಯಂತ್ರಿಸಲು ಕಾಲಕಾಲಕ್ಕೆ ಬದಲಾವಣೆ ಮಾಡುತ್ತೇವೆ. ಯಾವುದೇ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದರು.

Follow Us:
Download App:
  • android
  • ios