ಬೆಂಗಳೂರು(ಸೆ.12): ಕಾವೇರಿ ಕದನ ಜೋರಾಗಿದ್ದು, ರಾಜ್ಯದೆಲ್ಲೆಡೆ ಪ್ರತಿಭಟನೆ ಹೆಚ್ಚುತ್ತಿದೆ. ನೀರು ಹಂಚಿಕೆ ಆದೇಶ ಮಾರ್ಪಡು ಮಾಡುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆದಿದ್ದು, ಮತ್ತೊಮ್ಮೆ ಕರ್ನಾಟಕ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.

ಕರ್ನಾಟಕ ಸರ್ಕಾರದ ಮನವಿಯನ್ನು ಪರಿಗಣಿಸದ ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಸೆಪ್ಟೆಂಬರ್ 20ರವರೆಗೆ ಪ್ರತಿದಿನ 12 ಕ್ಯೂಸೆಕ್ ನೀರು ಬಿಡುವಂತೆ ಆದೇಶಿಸಿದೆ. ಈ ಮಧ್ಯೆ ಕರ್ನಾಟಕದ ನಾಗರಿಕರು ಸುಪ್ರೀಂ ಕೋರ್ಟ್ ಆದೇಶ ಪಾಲಿಸುವುದರೊಂದಿಗೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಆದೇಶಿಸಿದೆ.

ಸುಪ್ರೀಂ ಕೋರ್ಟ್ ಈ ಮೊದಲು ತನ್ನ ತೀರ್ಪಿನಲ್ಲಿ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಸೂಚನೆ ನೀಡಿತ್ತು. ಆದರೆ ತಮಿಳುನಾಡಿಗೆ ಹರಿಸಬೇಕಾದ ನೀರಿನ ಪ್ರಮಾಣವನ್ನು ಕಡಿಮೆ ಮಾಡಿದೆ. ಆದರೆ ಅವಧಿಯನ್ನು ನಾಲ್ಕು ದಿನಗಳ ಕಾಲ ಮುಂದೂಡಿದೆ.

ಸುಪ್ರೀಂ ಆದೇಶಕ್ಕೆ ಕರ್ನಾಟಕದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಭಟನೆಯ ಕಾವು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.