ವಸ್ತು ಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರ ತಂಡವನ್ನ ಕಳುಹಿಸುವಂತೆ ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಪ್ರಸ್ತಾಪವನ್ನ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ

ನವದೆಹಲಿ(ಸೆ.29): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ನಡೆದ ಕರ್ನಾಟಕ ಮತ್ತು ತಮಿಳುನಾಡು ಅಧಿಕಾರಿಗಳ ಸಂಧಾನ ಸಭೆ ಯಾವುದೇ ನಿರ್ಧಾರ ಕೈಗೊಳ್ಳುವಲ್ಲಿ ವಿಫಲವಾಗಿದೆ.

ವಸ್ತು ಸ್ಥಿತಿ ಅಧ್ಯಯನಕ್ಕಾಗಿ ಉಭಯ ರಾಜ್ಯಗಳಿಗೂ ಕೇಂದ್ರ ತಂಡವನ್ನ ಕಳುಹಿಸುವಂತೆ ಸಿಎಂ ಸಿದ್ದರಾಮಯ್ಯ ಮುಂದಿಟ್ಟ ಪ್ರಸ್ತಾಪವನ್ನ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ. ಯಾವುದೇ ಕೇಂದ್ರ ತಂಡದ ಅಧ್ಯಯನದ ಅವಶ್ಯಕತೆ ಇಲ್ಲ ಎಂದು ತಮಿಳುನಾಡು ಹಠಮಾರಿ ಧೋರಣೆ ತಳೆದಿದೆ. ಸಭೆ ಬಳಿಕ ಮಾತನಾಡಿದ ಜಲಸಂಪನ್ಮೂಲ ಸಚಿವೆ ಉಮಾಭಾರತಿ, ಎರಡೂ ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿದ್ದೇವೆ.ಕೇಂದ್ರದ ನಿರ್ಣಯವನ್ನು ಸುಪ್ರೀಂಕೋರ್ಟ್​ಗೆ ತಿಳಿಸುತ್ತೇವೆ ಎಂದು ತಿಳಿಸಿದ್ದಾರೆ.