ಸಿದ್ದುಗೆ ಸೆಡ್ಡು.. ಬಜೆಟ್ ಮಂಡನೆಗೆ ಡೇಟ್ ಫಿಕ್ಸ್

Karnataka assembly budget session on July 4th to 24th 2018
Highlights

ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧದ ನಡುವೆಯೂ ಬಜೆಟ್ ಮಂಡನೆಗೆ ಸಿಎಂ ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದಲೂ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದಾರೆ.

ಬೆಂಗಳೂರು ಜೂನ್ 20: ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧದ ನಡುವೆಯೂ ಬಜೆಟ್ ಮಂಡನೆಗೆ ಸಿಎಂ ಕುಮಾರಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದಲೂ ಗ್ರೀನ್ ಸಿಗ್ನಲ್ ಪಡೆದುಕೊಂಡು ಬಂದಿದ್ದಾರೆ.

ನಾಳೆಯಿಂದ ಬಜೆಟ್ ಪೂರ್ವಭಾವಿ ಸಭೆ ನಡೆಸಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಜುಲೈ 4 ರಿಂದ 24 ರವರೆಗೆ ಬಜೆಟ್ ಅಧಿವೇಶನ ನಡೆಸಲು ತಯಾರಿ ಮಾಡಿಕೊಂಡಿದ್ದಾರೆ. ಹಾಗಾಗಿ ಜೂನ್ 21 ರಿಂದ 30 ರವರೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದು ಹಿರಿಯ ಅಧಿಕಾರಿಗಳ ಬಳಿ ಮಾಹಿತಿಯನ್ನು ತರಿಸಿಕೊಂಡಿದ್ದಾರೆ.

ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಹೊಸ ಬಜೆಟ್ ಮಂಡನೆ ಮಾಡುವುದು ವಾಡಿಕೆ. ಆದರೆ ವರ್ಷದ ಆರಂಭದಲ್ಲಿ ಕಾಂಗ್ರೆಸ್ ಸರಕಾರದ ಕೊನೆಯ ಬಜೆಟ್ ಮಂಡನೆ ಮಾಡಿದ್ದ ಸಿದ್ದರಾಮಯ್ಯ ಕುಮಾರಸ್ವಾಮಿ ಹೊಸ ಬಜೆಟ್ ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಸರಕಾರದ ಹಳೆಯ ಯೋಜನೆ ಮುಂದುವರಿಸಿಕೊಂಡು ಹೋಗಬೇಕು ಎಂದು ಬಹಿರಂಗವಾಗಿಯೇ ಹೇಳಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದರು.

 

loader