ಇಂದು  ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ ಹೆಚ್ಚಿದೆ. ಈ ಸಂಬಂಧ ದೆಹಲಿಯಲ್ಲಿ ಚುನಾವಣಾ ಆಯೋಗದ ಸುದ್ದಿಗೋಷ್ಠಿ ನಡೆಸಲಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಸಾಧ್ಯತೆ ಇದೆ.

ನವದೆಹಲಿ : ಇಂದು ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ ಸಾಧ್ಯತೆ ಹೆಚ್ಚಿದೆ. ಈ ಸಂಬಂಧ ದೆಹಲಿಯಲ್ಲಿ ಚುನಾವಣಾ ಆಯೋಗದ ಸುದ್ದಿಗೋಷ್ಠಿ ನಡೆಸಲಿದ್ದು, ಮೇ 2ನೇ ವಾರದಲ್ಲಿ ಮತದಾನಕ್ಕೆ ದಿನಾಂಕ ನಿಗದಿ ಸಾಧ್ಯತೆ ಇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಧಿಸೂಚನೆ ಪ್ರಕಟಗೊಂಡರೆ ಇಂದಿನಿಂದಲೇ ನೀತಿ ಸಂಹಿತೆ ಕೂಡ ಜಾರಿಯಾಗಲಿದೆ. ಇಂದು ಬೆಂಗಳೂರಿಗೆ ಬಂದು ಸಭೆ ನಡೆಸಬೇಕಿದ್ದ ಚುನಾವಣಾ ಆಯುಕ್ತರಾದ ಓಂ ಪ್ರಕಾಶ್​ ರಾವತ್​ ಚುನಾವಣಾ ಆಯುಕ್ತರೊಂದಿಗೆ ಸಭೆ ನಡೆಸಬೇಕಿತ್ತು.

ಆದರೆ ಇಂದು ದಿಲ್ಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ. ಬೆಂಗಳೂರಿಗೆ ಭೇಟಿಗೂ ಮುನ್ನವೇ ದಿನಾಂಕ ಪ್ರಕಟ ಮಾಡುವ ಸಾಧ್ಯತೆ ಹೆಚ್ಚಿದೆ.