ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕ ಏಪ್ರಿಲ್ 15ರ ನಂತರವೇ ಪ್ರಕಟ ಏಪ್ರಿಲ್ ನಲ್ಲಿ ರಾಜ್ಯಕ್ಕೆ ಆಯೋಗ

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಚುನಾವಣೆ ದಿನಾಂಕವನ್ನು ಏಪ್ರಿಲ್ 15ರ ನಂತರವೇ ಪ್ರಕಟಿಸುವುದಾಗಿ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಓ.ಪಿ.ರಾವತ್ ಘೋಷಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾರ್ಚ್’ನಲ್ಲೇ ಚುನಾವಣೆ ಘೋಷಣೆ ಆಗಬಹುದೆಂಬ ನಿರೀಕ್ಷಿಸಲಾಗಿತ್ತು. ಆದರೆ ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ಈ ಬಗ್ಗೆ ಹೇಳಿಕೆ ನೀಡಿದ್ದು, ಏಪ್ರಿಲ್ 15ರ ಆಸುಪಾಸಿನಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಶಾಲಾ-ಕಾಲೇಜು ಪರೀಕ್ಷೆ ನಿಗದಿ ಹಿನ್ನೆಲೆಯಲ್ಲಿ ಏಪ್ರಿಲ್ 15ರ ನಂತರವೇ ರಾಜ್ಯ ವಿಧಾನಸಭೆಗೆ ಅಧಿಸೂಚನೆಯು ಪ್ರಕಟವಾಗಲಿದೆ. ಏಪ್ರಿಲ್ 15ರವರೆಗೂ ರಾಜ್ಯದಲ್ಲಿ ಚುನಾವಣೆ ನೀತಿ ಸಂಹಿತೆ ಅನ್ವಯವಾಗದಿರುವ ಹಿನ್ನೆಲೆಯಲ್ಲಿ, ಆವರೆಗೂ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸಲು ಅವಕಾಶ ಸಿಕ್ಕಿದಂತಾಗಿದೆ.

ಏಪ್ರಿಲ್ ನಲ್ಲಿ ರಾಜ್ಯಕ್ಕೆ ಆಯೋಗ:

ಏಪ್ರಿಲ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮೂವರು ಆಯುಕ್ತರುಗಳು ಭೇಟಿ ನೀಡಲಿದ್ದಾರೆ. ಚುನಾವಣೆ ಸುಗಮವಾಗಿ ನಡೆಸಲು ಬೇಕಾದ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ.

ಮೇ 28ಕ್ಕೆ 14ನೇ ವಿಧಾನಸಭೆಯ ಅವಧಿಯು ಮುಕ್ತಾಯವಾಗಲಿದೆ.