ಈಗಾಗಲೇ ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಬೆಂಗಳೂರು : ಈಗಾಗಲೇ ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ.
2ನೇ ಪಟ್ಟಿಯಲ್ಲಿ ತಮಗೆ ಟಿಕೆಟ್ ಸಿಗುತ್ತೋ ಇಲ್ಲವೋ ಎನ್ನುವ ಅನುಮಾನದ ಮೇರೆಗೆ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ತೆರಳಿ ಬಿಜೆಪಿಯ ಕೆಲ ಮುಖಂಡರು ಅವರನ್ನು ಭೇಟಿ ಮಾಡಿದ್ದಾರೆ.
ಇನ್ನೂ ಪ್ರಕಟವಾಗದ ಕ್ಷೇತ್ರಗಳ ಆಕಾಂಕ್ಷಿಗಳು ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಅವರನ್ನು ಭೇಟಿ ಮಾಡಲಾಗಿದೆ.
ಶಿವಾಜಿ ನಗರದ ಟಿಕೆಟ್ ಆಕಾಂಕ್ಷಿಯಾದ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಭೇಟಿ ಮಾಡಿದ್ದಾರೆ. ಮುಂದಿನ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗುವಂತೆ ಲಾಬಿ ನಡೆಸಲಾಗುತ್ತಿದೆ.
