Published : May 27 2017, 11:03 AM IST| Updated : Apr 11 2018, 12:36 PM IST
Share this Article
FB
TW
Linkdin
Whatsapp
Karnataka bandh 2
ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಿರುದ್ಧ, ರೈತರ ಸಾಲ ಮನ್ನಾ ಹಾಗೂ ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಸಂಬಂಧ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲು ಒತ್ತಾಯಿಸಿ ಕನ್ನಡ ಒಕ್ಕೂಟ ಜೂ.12ಕ್ಕೆ ‘ಕರ್ನಾಟಕ ಬಂದ್‌‘ಗೆ ಕರೆ ನೀಡಿದೆ
ಬೆಂಗಳೂರು(ಮೇ.27): ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಿರುದ್ಧ, ರೈತರ ಸಾಲ ಮನ್ನಾ ಹಾಗೂ ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಸಂಬಂಧ ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಲು ಒತ್ತಾಯಿಸಿ ಕನ್ನಡ ಒಕ್ಕೂಟ ಜೂ.12ಕ್ಕೆ ‘ಕರ್ನಾಟಕ ಬಂದ್‘ಗೆ ಕರೆ ನೀಡಿದೆ.
ರೈತರು ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರ ಶಾಶ್ವತ ಪರಿಹಾರ ಕೊಂಡುಕೊಳ್ಳುವಲ್ಲಿ ವಿಫಲವಾಗಿದೆ. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮುಖ್ಯಮಂತ್ರಿಗಳು ಸಭೆ ನಡೆಸಿ ಈ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು. ಜೂ. 12ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ ಜರುಗಲಿದೆ. ಕರ್ನಾಟಕ ಬಂದ್ಗೆ ವಿವಿಧ ಸುಮಾರು 2000 ಸಂಘಟನೆಗಳು ಕೈಜೋಡಿಸಲಿವೆ. ಅಂದು ಉದ್ದಿಮೆಗಳು, ಚಿತ್ರರಂಗ ಸೇರಿದಂತೆ ಪ್ರತಿಯೊಬ್ಬರೂ ಬಂದ್ಗೆ ಬೆಂಬಲ ನೀಡಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸಾವಿರ ಕೋಟಿಗೂ ಅಧಿಕ ಬೆಲೆಬಾಳುವ ಆಸ್ತಿಯನ್ನು ಹೊಂದಿರುವ ರಾಜ್ಯದ ಸಾರ್ವಜನಿಕ ಉದ್ದಿಮೆಗಳನ್ನು ಸ್ಥಗಿತಗೊಳಿಸುವ ಮೂಲಕ ಖಾಸಗಿಯವರಿಗೆ ಆಸ್ತಿ ಮಾರಾಟ ಮಾಡಲು ಸರ್ಕಾರಗಳು ಕುತಂತ್ರ ನಡೆಸುತ್ತಿವೆ. ಇಂತಹ ಕುತಂತ್ರವನ್ನು ಖಂಡಿಸಿ ಜೂ. 12ರ ಬೆಳಗ್ಗೆ 10 ಗಂಟೆಗೆ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್ ರಾರಯಲಿ ನಡೆಸಲಾಗುವುದು ಎಂದರು.
ಮೇಕೆದಾಟು ಜಾರಿಗೆ ಆಗ್ರಹ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಆರಂಭಿಸಲು ಆಗ್ರಹಿಸಿ ಜೂ. 6ರಂದು ಬೆಂಗಳೂರಿನ ಮೈಸೂರು ಬ್ಯಾಂಕ್ವೃತ್ತದಿಂದ ರಾಮನಗರ ಮಾರ್ಗವಾಗಿ ಕನಕಪುರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.