ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ.ಜಾಫರ್ ಷರೀಫ್ ಅವರ ಅಂತ್ಯಕ್ರಿಯೆ ಸೋಮವಾರ ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ನಡೆಯಿತು.

ಬೆಂಗಳೂರು[ನ.26]  ಕೇಂದ್ರದ ಮಾಜಿ ರೈಲ್ವೇ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಿ.ಕೆ.ಜಾಫರ್ ಷರೀಫ್(85ವರ್ಷ) ಅಂತಿಮ ಸಂಸ್ಕಾರ ನೆರವೇರಿಸಲಾಗಿದೆ. ಬೆಂಗಳೂರು ಮಿಲ್ಲರ್ಸ್ ರಸ್ತೆಯಲ್ಲಿರುವ ಖಬರಿಸ್ತಾನದಲ್ಲಿ ಮುಸ್ಲಿಂ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಂದಿದುರ್ಗಾ ರಸ್ತೆಯ ಜುಮ್ಮಾ ಮಸೀದಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರ ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಷರೀಫ್ ಅವರು ಭಾನುವಾರ ಮಧ್ಯಾಹ್ನ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು.

ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ದಿನೇಶ್ ಗುಂಡೂರಾವ್, ಸಚಿವ ಯುಟಿ ಖಾದರ್, ವಿಧಾನಪರಿಷತ್ ಸದಸ್ಯ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.ಕೆಪಿಸಿಸಿ ಕಚೇರಿಯಲ್ಲಿ ಷರೀಫ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.