ರಾಜ್ಯ ಬಿಜೆಪಿಯು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿಗಳಿಗಿಂತ ಹೆಚ್ಚು ಉಪಮುಖ್ಯಮಂತ್ರಿಗಳನ್ನು ನೀಡುವ ಮೂಲಕ ಅನನ್ಯ ಸಾಧನೆ ತೋರಿದೆ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡಿದ್ದಾರೆ.
ಬೆಂಗಳೂರು (ಆ.27): ರಾಜ್ಯ ಬಿಜೆಪಿಯು ಕರ್ನಾಟಕ ರಾಜ್ಯಕ್ಕೆ ಮುಖ್ಯಮಂತ್ರಿಗಳಿಗಿಂತ ಹೆಚ್ಚು ಉಪಮುಖ್ಯಮಂತ್ರಿಗಳನ್ನು ನೀಡುವ ಮೂಲಕ ಅನನ್ಯ ಸಾಧನೆ ತೋರಿದೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಲೇವಡಿ ಮಾಡಿದ್ದಾರೆ.
ಬಿಜೆಪಿ ಸರ್ಕಾರದ ನೂತನ ಸಚಿವರು ಹಾಗೂ ಉಪಮುಖ್ಯಮಂತ್ರಿಗಳ ಪಟ್ಟಿಬಿಡುಗಡೆಯಾದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಬಿಜೆಪಿಯು ರಾಜ್ಯಕ್ಕೆ ಈವರೆಗೆ 3 ಮುಖ್ಯಮಂತ್ರಿಗಳು ಹಾಗೂ 5 ಉಪ ಮುಖ್ಯಮಂತ್ರಿಗಳನ್ನು ನೀಡಿದೆ.
ರಾಜ್ಯ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮುಖ್ಯಮಂತ್ರಿಗಳಿಗಿಂತ ಹೆಚ್ಚು ಉಪ ಮುಖ್ಯಮಂತ್ರಿಗಳನ್ನು ನೀಡುವ ಮೂಲಕ ವೈಶಿಷ್ಟ್ಯತೆ ಮೆರೆದಿದೆ ಎಂದು ವ್ಯಂಗ್ಯವಾಡಿದ್ದಾರೆ.
