ಬೆಂಗಳೂರು(ಸೆ.6): ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಸೆ.9 ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್’ಗೆ ಕರೆ ನೀಡಿವೆ. ಇಂದು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಬಂದ್’ಗೆ ಕರೆ ನೀಡಿರುವುದನ್ನು ತಿಳಿಸಿದರು. ಸೆ.9 ರಂದು ಕರ್ನಾಟಕ ಬಂದ್ ಮಾಡುವ ಮೂಲಕ ಕನ್ನಡಿಗರ ಶಕ್ತಿ ಪ್ರದರ್ಶಿಸುತ್ತೇವೆ ಎಂದು ತಿಳಿಸಿದ್ದಾರೆ.