ಬೆಂಗಳೂರು, [ಸೆ. 27]: ರಾಜ್ಯದ  ಅನರ್ಹ ಶಾಸಕರ ಕ್ಷೇತ್ರಗಳಿಗೆ ಹೊಸ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ. ಇಂದು [ಶುಕ್ರವಾರ] ಕೇಂದ್ರ ಚುನಾವಣೆ ಆಯೋಗ ಹೊಸ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಮೊದಲು ಘೋಷಣೆಯಾಗಿದ್ದ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣೆ ಆಯೋಗ ಹೊಸ ಮುಹೂರ್ತ ನಿಗದಿಪಡಿಸಿದೆ. 

ಈ ಬೆಳವಣಿಗೆ ನಂತರ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಬಾಣ ಬಿಟ್ಟಿದ್ದಾರೆ.  ಕೇಂದ್ರ ಚುನಾವಣಾ ಆಯೋಗದ ಉದ್ದೇಶವೇ ಅರ್ಥವಾಗುತ್ತಿಲ್ಲ. ಆಯೋಗ ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸುತ್ತಿದೆ. ಮೊದಲು ತರಾತುರಿಯಲ್ಲಿ ಚುನಾವಣೆ ಮುಂದೂಡಿ, ಮತ್ತೆ ದಿನಾಂಕ ಘೋಷಣೆ ಮಾಡಿರುವುದು ಅಚ್ಚರಿ ಮೂಡಿಸಿದೆ. ಚುನಾವಣೆ ಎದುರಿಸಲು ನಾವು ಸಿದ್ಧರಿದ್ದೇವೆ, ಆದರೆ ಆಯೋಗದ ನಡೆ ಮಾತ್ರ ಸಹಜವಾಗಿಯೇ ಅನುಮಾನ ಮೂಡುವಂತಿದೆ ಎಂದು ಹೇಳಿದ್ದಾರೆ.

ಬೈ ಎಲೆಕ್ಷನ್‌ಗೆ ಹೊಸ ಡೇಟ್ ಫಿಕ್ಸ್: ಅನರ್ಹ ಶಾಸಕರಿಗೆ ಮತ್ತೆ ಟೆನ್ಷನ್ ಶುರು

ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಕರ್ನಾಟಕ ಬಿಜೆಪಿಯನ್ನು ಟ್ಯಾಗ್ ಮಾಡಿದ್ದಾರೆ. ಕಾಂಗ್ರೆಸ್ ಚುನಾವಣೆಗೆ ಸದಾ ಸಿದ್ಧವಾಗಿದೆ. ಆದರೆ ಬಿಜೆಪಿ ಹಳೆಯ ಚುನಾವಣಾ ದಿನಾಂಕಕ್ಕೆ ಚುನಾವಣೆ ಎದುರಿಸಲು ಸಿದ್ಧವಾಗಿರಲಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.

ಒಂದೇ ದಿನದ ಅವಧಿಯಲ್ಲಿ ಚುನಾವಣಾ ಆಯೋಗ ಹೊಸ ದಿನಾಂಕ ಘೋಷಣೆ ಮಾಡಿದೆ. 17 ವಿಧಾನಸಭಾ ಕ್ಷೇತ್ರಗಳ ಪೈಕಿ ಕೇವಲ 15 ಕ್ಷೇತ್ರಗಳಿಗಷ್ಟೇ ಉಪಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಅನರ್ಹ ಶಾಸಕ   ಮುನಿರತ್ನ ಪ್ರತಿನಿಧಿಸುತ್ತಿದ್ದ ಆರ್. ಆರ್ ನಗರ ಕ್ಷೇತ್ರ ಹಾಗೂ  ಪ್ರತಾಪ್ ಗೌಡ ಪಾಟೀಲ್ ಪ್ರತಿನಿಧಿಸುತ್ತಿದ್ದ ಮಸ್ಕಿ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. 

17 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಅಧಿಕೃತ ಪಟ್ಟಿ

ಕೇಂದ್ರ ಚುನಾವಣಾ ಆಯೋಗದಿಂದ ಹೊಸ ವೇಳಾಪಟ್ಟಿ
* ನವೆಂಬರ್ 11ರಿಂದ ನಾಮಪತ್ರಗಳ ಸಲ್ಲಿಕೆ ಆರಂಭ
* ನವೆಂಬರ್ 18 - ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
* ನವೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ದಿನ
* ನವೆಂಬರ್ 21 - ನಾಮಪತ್ರ ಹಿಂಪಡೆಯಲು ಕೊನೆ ದಿನ
* ಡಿಸೆಂಬರ್ 5ರಂದು 15 ಕ್ಷೇತ್ರಗಳಲ್ಲಿ ಮತದಾನ
* ಸದ್ಯಕ್ಕೆ ಚುನಾವಣಾ ಫಲಿತಾಂಶದ ದಿನಾಂಕ ನಿಗದಿ ಇಲ್ಲ

ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳು...
1) ಚಿಕ್ಕಬಳ್ಳಾಪುರ 2) ಮಹಾಲಕ್ಷ್ಮಿ ಲೇಔಟ್ 3) ಹೊಸಕೋಟೆ 4) ಹುಣಸೂರು 5) ಗೋಕಾಕ 6) ಯಶವಂತಪುರ 7) ಅಥಣಿ 8) ಕಾಗವಾಡ 9)ಶಿವಾಜಿನಗರ 10) ಕೆ.ಆರ್.ಪೇಟೆ 11) ಕೆ.ಆರ್.ಪುರಂ 12) ಹಿರೇಕೆರೂರು 13) ರಾಣೆಬೆನ್ನೂರು 14) ವಿಜಯನಗರ 15) ಯಲ್ಲಾಪುರ.

ಹಳೆ ವೇಳಾಪಟ್ಟಿ ಏನಿತ್ತು?
ನಾಮಪತ್ರ ಸಲ್ಲಿಕೆ ಅಧಿಸೂಚನೆ - ಸೆಪ್ಟೆಂಬರ್ 23
 ನಾಮಪತ್ರ ಸಲ್ಲಿಕೆ ಅಂತ್ಯ - ಸೆಪ್ಟೆಂಬರ್ 30
 ನಾಮಪತ್ರ ಪರಿಶೀಲನೆ -ಅಕ್ಟೋಬರ್ 1 
ನಾಮಪತ್ರ ವಾಪಸ್: ಅಕ್ಟೋಬರ್.3 
ಮತದಾನ ಅಕ್ಟೋಬರ್ 21
ಫಲಿತಾಂಶ ಅಕ್ಟೋಬರ್ 24