ಕುಂದಗೋಳ[ಏ. 28]  ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಾರಣಕ್ಕೆ  ಸಚಿವ ಸತೀಶ್ ಜಾರಕಿಹೊಳಿ ಕುಂದಗೋಳದಲ್ಲಿ ಕೈ ಮುಖಂಡರ ಸಭೆ ನಡೆಸಿದ್ದಾರೆ.  ಕಾಂಗ್ರೆಸ್ ಟಿಕೆಟ್ ಹಂಚಿಕೆ ಬಗ್ಗೆ ಕಾರ್ಯಕರ್ತರಿಂದ ಆಕ್ಷೇಪ ಕೇಳಿ ಬಂದಿದೆ. 

ಟಿಕೆಟ್ ಆಕಾಂಕ್ಷಿಯಾಗಿದ್ದ ಶಿವಾನಂದ ಬೆಂತೂರು ಬೆಂಬಲಿಗರು ಪ್ರತಿಭಟನೆ ನಡೆಸಿದ್ದು ಹೈಕಮಾಂಡ್ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಚಿಂಚೋಳಿ,ಕುಂದಗೋಳ ಕ್ಷೇತ್ರಕ್ಕೆ ಅಧಿಕೃತ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವುದಾಗಿ  ಶಿವಾನಂದ ಬೆಂತೂರು ಹೇಳಿದ್ದಾರೆ ಎನ್ನಲಾಗಿದೆ. ಕುಂದಗೋಳದಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸದೆ  ನಿರ್ಧಾರ ತೆಗೆದುಕೊಳ್ಳಲಾಗಿದೆ. ಜನಾಭಿಪ್ರಾಯ ಸಂಗ್ರಹಿಸದೆ ಶಿವಳ್ಳಿಯವರ ಪತ್ನಿ ಕುಸುಮಾ ಅವರಿಗೆ ಟಿಕೆಟ್ ಕೊಟ್ಟಿರುವುದು ಸರಿಯಲ್ಲ ಎಂಬ ಅಸಮಾಧಾನದ ಮಾತುಗಳು  ಕಾರ್ಯಕರ್ತರ ವಲಯದಲ್ಲಿ ಕೇಳಿ ಬಂದಿದೆ.