ಬೆಂಗಳೂರು [ಆ.12]: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ರಾಜ್ಯ ಸರ್ಕಾರ ಸಜ್ಜಾಗಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ವಾಪಸಾದ ಬೆನ್ನಲ್ಲೇ ರಾಜ್ಯ ಮುಖಂಡರು ಸಂಪುಟ ರಚನೆಗೆ ಮುಂದಾಗಿದ್ದಾರೆ. 

ಇದೇ ಆಗಸ್ಟ್ 14 ರಂದು ಬುಧವಾರ ರಾಜ್ಯ ಸಚಿವ ವಿಸ್ತರಣೆ ಯಾಗುವ ಸಾಧ್ಯತೆ ಹೆಚ್ಚಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ಸಚಿವರು ಈ ಸಂದರ್ಭದಲ್ಲಿ ಇರಬೇಕಾದ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಹೆಚ್ಚಿದೆ.

ಸಂಪುಟ ರಚನೆಗೆ ಕಾಲ ಕೂಡಿಬಂತು: ಝಂಡಾ ಹಾರಿಸಿ ಯಡಿಯೂರಪ್ಪ ದೆಹಲಿಗೆ

ಇನ್ನು ಸಂಪುಟ ವಿಸ್ತರಣೆಯಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ 16ರಂದು ದೆಹಲಿಗೆ ತೆರಳಿ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. 

ರಾಜ್ಯದಲ್ಲಿ ದೋಸ್ತಿ ಸರ್ಕಾರ ಉರುಳಿ, ಬಿಜೆಪಿ ಸರ್ಕಾರ ರಚನೆ ಮಾಡಿ ಒಂದು ತಿಂಗಳಾಗುತ್ತಾ ಬಂದರೂ ಕೂಡ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿ ಬಂದಿರಲಿಲ್ಲ. ಆದರೆ ಇದೇ ನಾಯಕರು ಸಚಿವ ಸಂಪುಟ ವಿಸ್ತರಣೆ ಮಾಡಲು ಮನಸ್ಸು ಮಾಡಿದ್ದಾರೆ ಎನ್ನಲಾಗಿದೆ.