ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರು-ಪೇರಾಗಿದ್ದು ಕುಮಾರಸ್ವಾಮಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ತೆರಳಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಸಿಎಂ ಕುಮಾರಸ್ವಾಮಿ  ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.

ಬೆಂಗಳೂರು(ಅ.24) ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಕುಮಾರಸ್ವಾಮಿ ಜಯದೇವ ಆಸ್ಪತ್ರೆಗೆ ತೆರಳಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೂ ಗೈರಾಗಿದ್ದ ಕುಮಾರಸ್ವಾಮಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.

ಜಯದೇವ ಆಸ್ಪತ್ರೆಗೆ ತೆರಳಿ ಸಾಮಾನ್ಯವಾಗಿ ಆರು ತಿಂಗಳಿಗೊಮ್ಮೆ ಮಾಡಿಸುವ ಎಕೋ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಗೈರಾಗಿದ್ದಕ್ಕೆ ಆಕ್ರೋಶ ಸಹ ವ್ಯಕ್ತವಾಗಿತ್ತು. ಸಮುದಾಯದ ಮುಖಂಡರು ವಿಧಾನಸೌಧದ ಬಾಂಕ್ವೆಟ್ ಹಾಲ್ ಎದುರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.