ಕರ್ನಾಟಕ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಸಿ, ಚುನಾವಣೆ ಮುಂದೂಡಲು ಆಗಲ್ಲ: ಸಿಎಂ

First Published 4, Mar 2018, 10:59 AM IST
Karnataka CM Batting For Ballet Paper
Highlights

ಬ್ಯಾಲೆಟ್ ಪೇಪರ್ ಬಳಕೆಯಿಂದ ಪಾರದರ್ಶಕ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ. ಈಗಾಗಲೇ ವಿಶ್ವದ ಅನೇಕ ದೇಶಗಳು ಇವಿಎಂ ಮಷಿನ್‌ಗಳನ್ನು ಬಿಟ್ಟು, ಬ್ಯಾಲೆಟ್ ಪೇಪರ್‌ಗೆ ವಾಪಸಾಗಿವೆ.

ಹುಬ್ಬಳ್ಳಿ(ಮಾ.04): ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಬೇಕು ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಬೇಕು. ಬ್ಯಾಲೆಟ್ ಪೇಪರ್ ಬಳಕೆಯಿಂದ ಪಾರದರ್ಶಕ ಚುನಾವಣೆ ನಡೆಸಲು ಸಾಧ್ಯವಾಗುತ್ತದೆ. ಈಗಾಗಲೇ ವಿಶ್ವದ ಅನೇಕ ದೇಶಗಳು ಇವಿಎಂ ಮಷಿನ್‌ಗಳನ್ನು ಬಿಟ್ಟು, ಬ್ಯಾಲೆಟ್ ಪೇಪರ್‌ಗೆ ವಾಪಸಾಗಿವೆ. ಈ ನಿಟ್ಟಿನಲ್ಲಿ ನಮ್ಮ ರಾಜ್ಯದಲ್ಲೂ ಬ್ಯಾಲೆಟ್ ಪೇಪರ್ ಬಳಸಬೇಕು ಎಂಬುದು ನನ್ನ ಅಭಿಮತವಾಗಿದೆ ಎಂದು ಅವರು ಹೇಳಿದರು.

ಇನ್ನು ವಿಧಾನಸಭಾ ಚುನಾವಣೆ ಮುಂದೂಡಿಕೆ ಬಗ್ಗೆ ಪ್ರಸ್ತಾಪಿಸಿದ ಅವರು, ಯಾವುದೇ ಕಾರಣಕ್ಕೂ ವಿಧಾನಸಭೆ ಚುನಾವಣೆ ಮುಂದೂಡಲು ಆಗಲ್ಲ. ಹಾಗೊಂದು ವೇಳೆ ಚುನಾವಣೆ ಮುಂದೂಡಬೇಕಾದರೆ, ಸಂವಿಧಾನ ತಿದ್ದುಪಡಿಯಾಗಬೇಕು ಎಂದು ಪ್ರತಿಪಾದಿಸಿದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಆದರೆ, ಹೀಗೆ ಹೇಳುತ್ತಲೆ ರಾಜ್ಯದಲ್ಲಿ ಬಿಜೆಪಿಯವರೇ ಮುಕ್ತರಾಗುತ್ತಾರೆ ಎಂದು ತಿರುಗೇಟು ನೀಡಿದರು

loader